ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನ ಜೋಯಿಡಾ ಗ್ರಾಮ ಪಂಚಾಯತ ವ್ಯಾಪ್ತಿಯ 6 ನೇಯ ಅಂಗನವಾಡಿ ಕೇಂದ್ರದಲ್ಲಿ ರಾಷ್ಟೀಯ ಪೋಷಣಾ ಅಭಿಯಾನದ ಕಾರ್ಯಕ್ರಮದಡಿ ರಾಷ್ಟ್ರೀಯ ಪೋಷಣಾ ಮಾಸಾಚರಣೆ ಕಾರ್ಯಕ್ರಮವನ್ನು ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರು ಹಾಗೂ ಹಳಿಯಾಳ,ಜೋಯಿಡಾ ಕ್ಷೇತ್ರದ ಶಾಸಕರಾದ ಆರ್ .ವಿ.ದೇಶಪಾಂಡೆಯವರು ಉದ್ಘಾಟಿಸಿದರು.
ಕಾರ್ಯಕ್ರಮದ ಕುರಿತು ಮಾತನಾಡಿದ ಅವರು ಮಕ್ಕಳಿಗೆ ಗುಣಮಟ್ಟದ ಆಹಾರ,ಸುರಕ್ಷತೆಯ ಬಗ್ಗೆ ಹೆಚ್ಚಿನ ಗಮನ ಇರಲಿ ಎಂದು ಹೇಳಿದರು.ನಂತರ ಸಕ್ಷಮ ಅಂಗನವಾಡಿ ಕೇಂದ್ರಗಳಿಗೆ ಟಿವಿ ವಿತರಣೆಗೆ ಚಾಲನೆ ನೀಡಿದರು.ಅಂಗನವಾಡಿ ಕೇಂದ್ರದ ಆವರಣದಲ್ಲಿ ಪರಿಸರ ಸಂರಕ್ಷಣೆಯ ಜಾಗೃತಿ ಅಂಗವಾಗಿ ಮಾ ಕೆ ನಾಮ್ ಏಕ್ ಪೇಡ (ತಾಯಿಯ ಹೆಸರಿನಲ್ಲಿ ಒಂದು ಮರ)ಅಭಿಯಾನದಡಿ ಗಿಡವನ್ನು ನೆಟ್ಟರು.
ಈ ಸಂದರ್ಭದಲ್ಲಿ ಜೋಯಿಡಾ ತಹಶೀಲ್ದಾರ್ ಮಂಜುನಾಥ ಮುನ್ನೋಳ್ಳಿ , ತಾಲೂಕಾ ಕಾರ್ಯನಿರ್ವಾಹಕ ಅಧಿಕಾರಿ ಎನ್ ಭಾರತಿ ಮೇಡಂ,ತಾಲೂಕಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸಿದ್ದಲಿಂಗಪ್ಪ ಕೆ. ಪಿಎಸ್ಐ ಮಹೇಶ ಮಾಳಿ, ಜನಪ್ರತಿನಿಧಿಗಳು,ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಉಪಸ್ಥಿತರಿದ್ದರು.