ಸುದ್ಧಿಕನ್ನಡ ವಾರ್ತೆ
ಪಣಜಿ: ಲೈಂಗಿಕ ದೌರ್ಜನ್ಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ರವರನ್ನು ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಅಡಿಯಕ್ಲಿ ಗೋವಾದಲ್ಲಿ ಹೈದರಾಬಾದ್ ಪೋಲಿಸರು ಬಂಧಿಸಿದ್ದಾರೆ.
ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ವಿರುದ್ಧ 22 ವರ್ಷದ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪವಿದೆ. ಈ ಕುರಿತಂತೆ ಜಾನಿ ಮಾಸ್ಟರ್ ವಿರುದ್ಧ ಪ್ರಕರಣ ಕೂಡ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಹೈದರಾಬಾದ್ ಪೋಲಿಸರು ಗೋವಾದಲ್ಲಿ ಜಾನಿ ಮಾಸ್ಟರ್ ರನ್ನು ಬಂಧಿಸಿದ್ದಾರೆ.
ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಕನ್ನಡ,ತೆಲಗು,ತಮಿಳು, ಭಾಷೆಯ ಚಲನಚಿತ್ರಗಳಲ್ಲಿ ಸ್ಟಾರ್ ನಟರಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. ತಮಿಳಿ ಕಾವಾಲಯ್ಯ, ಬೀಸ್ಟ, ಕನ್ನಡದಲ್ಲಿ ಪುನೀತ್ ರಾಜಕುಮಾರ್, ಕಿಚ್ಚ ಸುದೀಪ್ ರವರ ಚಲನಚಿತ್ರಗಳಿಗೂ ಜಾನಿ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ.