ಸುದ್ದಿ ಕನ್ನಡ ವಾರ್ತೆ

ಯಲ್ಲಾಪುರ : ಚಲಿಸುತ್ತಿದ್ದ ಕಾರು ಒಂದಕ್ಕೆ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯ ಯಲ್ಲಾಪುರ ತಾಲೂಕಿನಲ್ಲಿ ಭಾನುವಾರ ನಡೆದಿದೆ.

ಅದೃಷ್ಟವಶಾತ್ ಈ ಕಾರಿನಲ್ಲಿ ಪ್ರಯಾಣ ನಡೆಸುತ್ತಿದ್ದವರು ಕೂಡಲೇ ಕಾರಿನಿಂದ ಹೊರ ನಡೆದಿದ್ದರಿಂದ ಜೀವ ಉಳಿಸಿಕೊಂಡಿದ್ದಾರೆ.

ಕಾರೊಂದಕ್ಕೆ ಬೆಂಕಿ ಆಕಸ್ಮಿಕವಾಗಿ ಹೊತ್ತಿಕೊಂಡು ಉರಿದುಹೋದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದಲ್ಲಿ ರವಿವಾರ ಬೆಳಿಗ್ಗೆ ನಡೆದಿದೆ.

ಯಲ್ಲಾಪುರದಿಂದ ಅಂಕೋಲಾ ಕಡೆಗೆ ಹೊರಟಿದ್ದ ದೆಹಲಿಯ ಕಾರು ಹೊತ್ತಿಕೊಂಡಿದೆ.ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ಆರಿಸುವ ಪ್ರಯತ್ನ ಮಾಡಿದರೂ ಕಾರು ಸಂಪೂರ್ಣ ಸುಟ್ಟು ಹೋಗಿತ್ತು. ಕಾರಿನಲ್ಲಿದ್ದವರು ಹೊರಗೆ ಹೋಗಿ ಪ್ರಾಣ ಉಳಿಸಿಕೊಂಡಿದ್ದಾರೆ.

ಯಲ್ಲಾಪುರ ಪೋಲಿಸರು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ.