ಸುದ್ದಿ ಕನ್ನಡ ವಾರ್ತೆ
ಪಣಜಿ: ಕೇಂದ್ರ ಗೃಹ ಮಂತ್ರಿ ಅಮಿತ್ ಶಾಹ್ ರವರು ಶನಿವಾರ ಗೋವಾಕ್ಕೆ ಆಗಮಿಸಲಿದ್ದಾರೆ.
ಗೋವಾ ರಾಜಧಾನಿ ಸಮೀಪದ ಶಾಮಪ್ರಸಾದ ಮುಖರ್ಜಿ ಸ್ಟೇಡಿಯಂ ನಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಗೋವಾ ರಾಜ್ಯದ ಎಲ್ಲೆಡೆಯಿಂದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮನವಿ ಮಾಡಿದ್ದಾರೆ.
ಪಣಜಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಈ ಮಾಹಿತಿ ನೀಡಿದ್ದಾರೆ.
ಕೇಂದ್ರ ಮಂತ್ರಿ ಅಮಿತ್ ಶಾ ರವರು ಗೋವಾ ಸರ್ಕಾರದ ಮಾಜಿ ಗರ್ ಯೋಜನೆಯನ್ನು ಉದ್ಘಾಟಿಸಲು ಆಗಮಿಸಲಿದ್ದಾರೆ. ಈ ಕಾರ್ಯಕ್ರಮಕ್ಕೆ ಆಗಮಿಸಲು ಗೋವಾ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿ ಕ್ಷೇತ್ರದಿಂದ ಶನಿವಾರ ಮಧ್ಯಾಹ್ನ 2 ಗಂಟೆಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಇಂದು ಮುಖ್ಯಮಂತ್ರಿ ಸಾವಂತ್ ಮಾಹಿತಿ ನೀಡಿದ್ದಾರೆ.
ಗೋವಾ ರಾಜ್ಯದಲ್ಲಿ ಅಕ್ರಮ ಮನೆಗಳನ್ನು ಸಕ್ರಮಗೊಳಿಸುವ ಯೋಜನೆಯ ಅರ್ಜಿಯನ್ನು ಕೂಡ ಈ ಕಾರ್ಯಕ್ರಮದಲ್ಲಿ ವಿತರಣೆ ಮಾಡಲಾಗುವುದು. ಯೋಜನೆಯ ಪ್ರಯೋಜನ ಪಡೆಯುವವರು ಕಾರ್ಯಕ್ರಮದಲ್ಲಿ ಉಪಸ್ಥಿತಿ ಇರುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.
ಈ ಕಾರ್ಯಕ್ರಮದಲ್ಲಿ ಮಾಜಿ ಯೋಜನೆಯ ಮಾಹಿತಿ ನೀಡುವ ಪುಸ್ತಕವನ್ನು ಕೂಡ ಬಿಡುಗಡೆಗೊಳಿಸಲಾಗುವುದು. ಇಷ್ಟ ಇಲ್ಲದೆ ಅಕ್ರಮ ಮನೆಗಳ ಸಕ್ರಮಗೊಳಿಸಿರುವ 2 ಜನರಿಗೆ ಸನದ್ ವಿತರಣೆ ಮಾಡಲಾಗುವುದು. 1972ರ ಪೂರ್ವದಲ್ಲಿರುವ ಮನೆ ಸಕ್ರಮಗೊಳಿಸಿರುವ ಪ್ರಮಾಣ ಪತ್ರ ಹಾಗೂ ಕೋಮುನಿದ ಜಮೀನಿನಲ್ಲಿರುವ ಮನೆಯನ್ನು ಸಕ್ರಮಗೊಳಿಸಲು ಇಬ್ಬರಿಗೆ ಅರ್ಜಿಯನ್ನು ಕೇಂದ್ರ ಮಂತ್ರಿ ಅಮಿತ್ ಶಾಹ ರವರು ವಿತರಣೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.