ಸುದ್ದಿ ಕನ್ನಡ ವಾರ್ತೆ

ಜೋಯಿಡಾ:ತಾಲೂಕಿನ ಜಿಲ್ಲಾ ಪಂಚಾಯತ ಉತ್ತರಕನ್ನಡ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಜೋಯಿಡಾ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಹನುಮಾನ ಲೇನ ರಾಮನಗರ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಜೋಯಿಡಾ ತಾಲೂಕ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟ 2025 – 26 ರ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಿಂದೋಳಿ ಶಾಲೆಯ ವಿದ್ಯಾರ್ಥಿಗಳು ಬಾಲಕಿಯರ ವಿಭಾಗದಲ್ಲಿ 100 ಮೀಟರ ರೀಲೆ ಪ್ರಥಮ,ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಮತ್ತು ಆಯ್ಕೆಯಾಗಿದ್ದಾರೆ.ಮತ್ತು ಚಕ್ರ ಎಸೆತ ಸ್ಪರ್ಧೆಯಲ್ಲಿ ನೇಹಾ ಮಿರಾಶಿ ದ್ವಿತೀಯ,600 ಮೀಟರ ಓಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.ಇವರ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕ ರಾದ ಅನಿಲ ರಾಠೋಡ,ಸಹ ಶಿಕ್ಷಕ ರಾದ ಆನಂದ ಪಿ,ವಿದ್ಯಾ ಮೇಡಂ ಎಸ್.ಡಿ.ಎಂ.ಸಿ ಅಧ್ಯಕ್ಷ ಗುರುನಾಥ ಮಾಜಾಳಕರ ಉಪಾಧ್ಯಕ್ಷರು,ಸದಸ್ಯರು,ಪಾಲಕರು,ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.