ಸುದ್ದಿ ಕನ್ನಡ

ಜೋಯಿಡಾ:ತಾಲೂಕಿನ ಅವೇಡಾ ಗ್ರಾಮ ಪಂಚಾಯತ ವ್ಯಾಪ್ತಿಯ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಗಾಂಧೀಜಿ ಜಯಂತಿ ಅಂಗವಾಗಿ ಪೂಜಾ ಕಾರ್ಯಕ್ರಮ ಹಾಗೂ ಸ್ವಚ್ಛತಾ ಕಾರ್ಮಿಕರನ್ನು ಸನ್ಮಾನಿಸಲಾಯಿತು.

ನಂತರ ವಿಶೇಷ ಗ್ರಾಮ ಸಭೆಯನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷ ಅರುಣ ಭಗವತಿರಾಜ್,ಉಪಾಧ್ಯಕ್ಷೆ ಲಕ್ಷ್ಮೀ ಮುರಾರಿ,ಸದಸ್ಯರಾದ ಸುನಿಲ ಕಾಂಬಳೆ,ರೇಣುಕಾ ಗದ್ದಿ,ಗೌಸ ಅಮ್ಮಿನ್ ಬಾವಿ,ಪಂಚಾಯತ ಅಭಿವೃದ್ಧಿ ಅಧಿಕಾರಿ ಲೀನಾ ನಾಯ್ಕ,ಸಿಬ್ಬಂದಿ ವರ್ಗ, ಅಂಗನವಾಡಿ ಕಾರ್ಯಕರ್ತೆಯರು,ಆಶಾ ಕಾರ್ಯಕರ್ತೆಯರು,ಕೃಷಿ ಸಖಿ,ಪಶು ಸಖಿ,ಸ್ವ ಸಹಾಯ ಸಂಘಗಳ ಸದಸ್ಯರು, ಸಾರ್ವಜನಿಕರು ಭಾಗವಹಿಸಿದ್ದರು.