ಸುದ್ಧಿಕನ್ನಡ ವಾರ್ತೆ

Goa: ಗೋವಾದ ವಾಸ್ಕೊ ದಾಬೋಲಿಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುವ ವಿಮಾನಗಳನ್ನು ಗೋವಾದ ಮೋಪಾ ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಿರುಗಿಸವಂತೆ ಜಿಎಂಆರ್ ಕಂಪನಿಯು ತನ್ನ ಒತ್ತಡ ತಂತ್ರವನ್ನು ಅನುಸರಿಸುತ್ತಿದೆ ಆದರೆ ಇದು ಯಶಸ್ವಿಯಾಗುವುದಿಲ್ಲ. ಗೋವಾ ರಾಜ್ಯ ಸರ್ಕಾರವು ಗೋವಾದಲ್ಲಿ ಈ ಎರಡೂ ವಿಮಾನ ನಿಲ್ದಾಣವನ್ನು ಕಾರ್ಯನಿರ್ವಹಿಸಲು ಬಯಸುತ್ತದೆ. ಗೋವಾದ ದಾಬೋಲಿಂ ವಿಮಾನ ನಿಲ್ದಾಣವನ್ನು ಬಂದ್ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡುವುದಿಲ್ಲ ಎಂದು ಗೋವಾ ರಾಜ್ಯ ಸಾರಿಗೆ ಸಚಿವ ಮಾವಿನ್ ಗುದಿನ್ಹೊ ಹೇಳಿದ್ದಾರೆ.

ಗೋವಾ ರಾಜ್ಯದ ಜನತೆಯು ದಾಬೋಲಿಂ ವಿಮಾನ ನಿಲ್ದಾಣ ಬಂದ್ ಆಗುತ್ತದೆಯೇ ಎಂದು ಆತಂಕಪಡುವ ಅಗತ್ಯವಿಲ್ಲ. ಪ್ರಸಕ್ತ ಪ್ರವಾಸಿ ಸೀಜನ್‍ನಲ್ಲಿ ದಾಬೋಲಿಂ ವಿಮಾನ ನಿಲ್ದಾಣಕ್ಕೆ ಹಲವು ಚಾರ್ಟರ್ ವಿಮಾನಗಳು ಬಂದು ಇಳಿಯಲಿದೆ. ಈ ನಿಲ್ದಾಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಅಂತರಾಷ್ಟ್ರೀಯ ವಿಮಾನಗಳು ಬಂದು ಹೋಗುತ್ತಿರುತ್ತದೆ. ಗೋವಾದ ದಾಬೋಲಿಂ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಅಂತರಾಷ್ಟ್ರೀಯ ವಿಮಾನಗಳು ಬರಬೇಕು ಎಂದು ಕೇಂದ್ರ ಸರ್ಕಾರವನ್ನು ನಾವು ಒತ್ತಾರಿಸುತ್ತಿದ್ದೇವೆ, ಕೇಂದ್ರ ನಾಗರೀಕ ವಿಮಾನಯಾನ ಸಚಿವಾಲಯದಿಂದ ನಮಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಸಚಿವ ಮಾವಿನ್ ಗುದಿನ್ಹೊ ಮಾಹಿತಿ ನೀಡಿದರು.

ಮೋಪಾ ಮತ್ತು ದಾಬೋಲಿಂ ವಿಮಾನ ನಿಲ್ದಾಣಗಳೆರಡನ್ನೂ ಅಧ್ಯಯನ ಮಾಡಲು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರವು ತಾಂತ್ರಿಕ ಸಮೀತಿಯನ್ನು ಕಳುಹಿಸಲು ಸಿದ್ಧವಾಗಿದೆ. ಕಳೆದ ಕೆಲವು ದಿನಗಳಿಂದ “ಇಂಡಿಗೋ” ಸೇರಿದಂತೆ ಕೆಲವು ಇತರ ಕಂಪನಿಗಳು ದಾಬೋಲಿಯಿಂದ ತಮ್ಮ ವಿಮಾನಗಳನ್ನು ಹೆಚ್ಚಳ ಮಾಡಿದೆ ಎಂದು ಸಚಿವ ಮಾವಿನ್ ಗುದಿನ್ಹೊ ಮಾಹಿತಿ ನೀಡಿದರು.