ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನ ನಂದಿಗದ್ದೆ ಗ್ರಾಮ ಪಂಚಾಯತ ವ್ಯಾಪ್ತಿಯ ಪಂಚಾಯತ ಕಾರ್ಯಾಲಯದಲ್ಲಿ ಪರಮ ಪವಿತ್ರವಾದ ರಾಮಾಯಣದ ಮೂಲಕ ಜೀವನ ಮೌಲ್ಯಗಳನ್ನು ಜಗತ್ತಿಗೆ ತಿಳಿಸಿದ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಗ್ರಾಮ ಪಂಚಾಯತ ಅಧ್ಯಕ್ಷರಾದ ಅರುಣ ದೇಸಾಯಿ,ಉಪಾಧ್ಯಕ್ಷೆ ದಾಕ್ಷಾಯಣಿ ದಾನಶೂರ, ಸದಸ್ಯರಾದ ಧವಳೋ ಗಣೇಶ ಸಾವರ್ಕರ್,ಗ್ರಾಮ ಪಂಚಾಯತ ಕಾರ್ಯದರ್ಶಿ ಗಜಾನನ ಸಾವರ್ಕರ್,ಸಿಬ್ಬಂದಿಗಳಾದ ನಾರಾಯಣ ಬಾಂದೇಕರ, ಪರಮೇಶ್ವರ ಸಿದ್ದಿ,ಮನವೇಲ ಎಫ್,ಕ್ಲೇವನ್ ಎಫ್,ರಾಹುಲ ವಾಜ್,ಪುಲೋರಿನ ಗೋಮ್ಸ,ಪ್ರಜ್ವಲ ದಾನಶೂರ,ಚಂದ್ರ ಕಾಂತ ನಾಯ್ಕ ಪುಷ್ಪ ನಮನ ಸಲ್ಲಿಸಿದರು.