Banner Ad

ಸುದ್ದಿ ಕನ್ನಡ ವಾರ್ತೆ

ಜೋಯಿಡಾ: ನಂದಿಗದ್ದೆ ಪಂಚಾಯತದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ. ಜೋಯಿಡಾ ತಾಲೂಕಿನ ನಂದಿಗದ್ದೆ ಗ್ರಾಮ ಪಂಚಾಯತ ವ್ಯಾಪ್ತಿಯ ಪಂಚಾಯತ ಕಾರ್ಯಾಲಯದಲ್ಲಿ ಪರಮ ಪವಿತ್ರವಾದ ರಾಮಾಯಣದ ಮೂಲಕ ಜೀವನ ಮೌಲ್ಯಗಳನ್ನು ಜಗತ್ತಿಗೆ ತಿಳಿಸಿದ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.

Banner Ad

ಗ್ರಾಮ ಪಂಚಾಯತ ಅಧ್ಯಕ್ಷರಾದ ಅರುಣ ದೇಸಾಯಿ ಪುಷ್ಪ ನಮನ ಸಲ್ಲಿಸಿ ಮಹರ್ಷಿ ಗಳಿಗೆ ವಂದನೆ ಸಲ್ಲಿಸಿದರು ಗ್ರಾಮ ಪಂಚಾಯತ್ ಸದಸ್ಯರು ಗೌರವ ಸಲ್ಲಿಸಿದರು ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ದಾಕ್ಷಾಯಣಿ ದಾನಶೂರ, ಸದಸ್ಯರಾದ ಧವಳೋ ಗಣೇಶ ಸಾವರ್ಕರ್,ಗ್ರಾಮ ಪಂಚಾಯತ ಕಾರ್ಯದರ್ಶಿ ಗಜಾನನ ಸಾವರ್ಕರ್ ಸಿಬ್ಬಂದಿಗಳು ಇದ್ದರು

Banner Ad