ಸುದ್ದಿ ಕನ್ನಡ ವಾರ್ತೆ

ಜೋಯಿಡಾ:ತಾಲೂಕಿನ ಉಳವಿ ಗ್ರಾಮ ಪಂಚಾಯತ ವ್ಯಾಪ್ತಿಯ ಅಂಬೋಳಿ ಬೀಟ್ ನ ಉಪ ವಲಯ ಅರಣ್ಯಾಧಿಕಾರಿ ಹಾಗೂ ಮೋಜಣಿದಾರ ಗುರುರಾಜ್ ಗೌಡರಿಗೆ ವನ್ಯಜೀವಿಗಳ ಬಗ್ಗೆ ಅಧ್ಯಯನ,ಸಂರಕ್ಷಣೆಯಲ್ಲಿ ವಿಶೇಷ ಸಾಧನೆ ಮಾಡಿದ್ದನ್ನು ಗುರುತಿಸಿ 2025 – 26 ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕೃತರಾಗಿ ಆಯ್ಕೆಯಾಗಿದ್ದರು.

ಬುಧವಾರ ಬೆಂಗಳೂರಿನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕರ್ನಾಟಕ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರಿಂದ ಚಿನ್ನದ ಪದಕ ಪಡೆದರು.ಈ ಸಂದರ್ಭದಲ್ಲಿ ಅರಣ್ಯ ಸಚಿವರಾದ ಈಶ್ವರ ಖಂಡ್ರೆ,ಖ್ಯಾತ ಕ್ರಿಕೆಟಿಗ ಅನಿಲ ಕುಂಬ್ಳೆ,ಗಣ್ಯರು,ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚೆಗೆ ಉಪವಲಯ ಅರಣ್ಯಾ ಧಿಕಾರಿಗಳಾದ ಗುರುರಾಜ್ ಗೌಡರಿಗೆ ಕೇಂದ್ರ ಸರ್ಕಾರದ ಅರಣ್ಯ ಸಚಿವರಿಂದಲೂ ವನ್ಯಜೀವಿಗಳ ಸಂರಕ್ಷಣೆಯಲ್ಲಿಯ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಿದ್ದನ್ನು ನೆನಪಿಸಬಹುದು. ಇವರ ಸಾಧನೆಗೆ ಪಾಲಕರು,ಹಿತೈಷಿಗಳು, ಅಧಿಕಾರಿ ವರ್ಗದವರು, ಗಣ್ಯರು, ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.