ಸುದ್ದಿ ಕನ್ನಡ ವಾರ್ತೆ
ಶಿರಸಿ ಶೈಕ್ಷಣಿಕ ಜಿಲ್ಲೆಯ 14 ವರ್ಷ ವಯೋಮಿತಿ ಒಳಗಿನ ಕಬಡ್ಡಿ ಪಂದ್ಯಾವಳಿಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಜೋಯಿಡಾ ಹಾಗೂ ರಾಣಿ ಚೆನ್ನಮ್ಮ ವಸತಿ ಶಾಲೆ ರಾಮನಗರದ ವಿದ್ಯಾರ್ಥಿನಿಯರು ಬೆಳಗಾವಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಈ ಸಾಧನೆಯನ್ನು ಮಾಡಿದಂತಹ ವಿದ್ಯಾರ್ಥಿನಿಯರಿಗೆ ಹಾಗೂ ತರಬೇತಿ ನೀಡಿದ ವೀರೇಶ ನಿಡವಣಿ ಹಾಗೂ ರಾಣಿ ಚೆನ್ನಮ್ಮ ವಸತಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸಂತೋಷ್ ಬೀರನಹೊಳಿ ಇವರಿಗೆ ಪ್ರಾಂಶುಲರಾದ ಗಿರೀಶ್ ಕುಮಾರ್ ಹಿರೇಮಠ ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ಇದಲ್ಲದೇ ಈ ಸಾಧನೆ ಮಾಡಿದಂತಹ ವಿದ್ಯಾರ್ಥಿಗಳಿಗೆ ತಾಲೂಕ ದೈಹಿಕ ಶಿಕ್ಷಣ ಪರೀವೀಕ್ಷಕರಾದಂತಹ ಶ್ರೀಮತಿ ವಿಜಯಲಕ್ಷ್ಮಿ ಹಂಜಿ, ತಾಲೂಕ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಎಲ್ ಎಮ್ ಪಟಗಾರ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿಯಶವಂತ ನಾಯ್ಕ, ಜೋಯಿಡಾ ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಶೀರ್ ಅಹ್ಮದ್ ಶೇಕ್ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳಾದ ಉಮೇಶ್ ವೈ ಕೆ ಇವರು ಮಕ್ಕಳಿಗೆ ಶುಭ ಹಾರೈಸಿದ್ದಾರೆ.
ಗುರುವಾರ ಈ ಕ್ರೀಡಾಕೂಟ ನಡೆಯಲಿದೆ.