ಸುದ್ಧಿಕನ್ನಡ ವಾರ್ತೆ
ಪಣಜಿ: ಗೋವಾ ರಾಜ್ಯದಲ್ಲಿ ಮತ್ತೆ ಮಳೆ ಆರಂಭಗೊಂಡಿದೆ. ಗೋವಾ ರಾಜ್ಯದ ಸತ್ತರಿ ತಾಲೂಕಿನಲ್ಲಿ ಶನಿವಾರ ಸಂಜೆ ಸುರಿದ ಭಾರಿ ಗಾಳಿ ಮಳೆಗೆ ಹಲವೆಡ ದೊಡ್ಡ ದೊಡ್ಡ ಮರಗಳು ವಿದ್ಯುತ್ ಲೈನ್ ಮೇಲೆ ಬಿದ್ದ ಘಟನೆ ನಡೆದಿದೆ.
ಗೋವಾ ರಾಜ್ಯದ ಸತ್ತರಿ ತಾಲೂಕಿನಲ್ಲಿ ಶನಿವಾರ ಸಂಜೆ ಕೇವಲ ಅರ್ಧ ಗಂಟೆ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಸಂದರ್ಭದಲ್ಲಿ ಭಾರಿ ಗಾಡಿ ಮಳೆಗೆ ಹೆಚ್ಚಿನ ಹಾನಿ ಸಂಭವಿಸಿರುವುದಾಗಿ ವರದಿಯಾಗಿದೆ.
ಸತ್ತರಿ ತಾಲೂಕಿನ ಹಲವೆಡೆ ಗ್ರಾಮೀಣ ಭಾಗದ ರಸ್ತೆಯಲ್ಲಿ ಬೃಹತ್ ಮರ ಬಿದ್ದಿದ್ದು ತೆರೆವು ಕಾರ್ಯಾಚರಣೆ ನಡೆಯುತ್ತಿದೆ. ಹಲವೆಡೆ ವಿದ್ಯುತ್ ಲೈನ್ ಮೇಲೆ ಮರ ಬಿದ್ದಿರುವುದರಿಂದ ಗ್ರಾಮೀಣ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.