ಸುದ್ದಿ ಕನ್ನಡ ವಾರ್ತೆ

ಶಿರಸಿ:ನಗರದ ಪತ್ರಿಕಾ ಭವನದಲ್ಲಿ ಜೀವ ಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ ಹಾಗೂ ಸ್ಕೋಡವೆಸ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕರಾದ ವೆಂಕಟೇಶ ನಾಯ್ಕ ಅವರು ಉತ್ತರಕನ್ನಡ ಜಿಲ್ಲಾ ಪತ್ರಿಕಾ ಮಂಡಳಿಯು 1947 ರಿಂದ ನಡೆದು ಬಂದ ದಾರಿಯ ಸಮಗ್ರ ಮಾಹಿತಿಯನ್ನು ಒಳಗೊಂಡ ಸುವರ್ಣ ಪಥ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿದ ರು.

ಕಾರ್ಯಕ್ರಮದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಾಯ ಭಟ್ಟ ಬಕ್ಕಳ ಸಂಘವು 1974 ರಲ್ಲಿ ಅಂದಿನ ಹಿರಿಯರು ಸಾಕಿ ಬೆಳೆಸಿದ ಪರಿಶ್ರಮದ ಫಲವಾಗಿ ಇಂತ ಒಂದು ಪತ್ರಿಕಾ ಭವನ ನಿರ್ಮಾಣ ಮಾಡಲು ಸಹಾಯಕಾರಿಯಾಗಿದೆ ಎಂದು ಹೇಳಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜೀವ ಜಲ ಕಾರ್ಯ ಪಡೆ ಅಧ್ಯಕ್ಷರಾದ ಶ್ರೀನಿವಾಸ ಹೆಬ್ಬಾರ ಇಂದು ನಮ್ಮ ಉತ್ತರಕನ್ನಡ ಜಿಲ್ಲೆಯ ಪತ್ರಕರ್ತ ರು ರಾಜ್ಯ,ದೇಶದ ಮಟ್ಟದಲ್ಲಿ ಅನೇಕ ಪತ್ರಿಕೆಯ ಹಾಗೂ ದೃಶ್ಯ ಮಾಧ್ಯಮದಲ್ಲಿ ಉನ್ನತ ಸ್ಥಾನದಲ್ಲಿ ಕೆಲಸ, ಸಾಧನೆ ಮಾಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಹೇಳಿದರು. ಸ್ಕೋಡವೆಸ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕರಾದ ವೆಂಕಟೇಶ ನಾಯ್ಕ ಮಾತನಾಡಿ ಪತ್ರಕರ್ತ ಮಿತ್ರರು ತಮ್ಮಲ್ಲಿ ಹಲವಾರು ವೈಯುಕ್ತಿಕ ಸಮಸ್ಯೆ ಗಳಿದ್ದರು,ಅವುಗಳನ್ನು ಬದಿಗೊತ್ತಿ ಸಮಾಜದ ಅಂಕು ಡೊಂಕು ಗಳನ್ನು ತಿದ್ದುವ ಕೆಲಸವನ್ನು ನ್ಯಾಯ ಮತ್ತು ಶ್ರದ್ಧೆಯಿಂದ ಮಾಡುತ್ತಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.