ಸುದ್ಧಿಕನ್ನಡ ವಾರ್ತೆ

ಜೊಯಿಡಾ: ಮನೆಯಲ್ಲಿ ಅಕ್ರಮವಾಗಿ ನವ್ಯಜೀವಿ ಪಾಣಿಗಳ ಅವಶೇಷಗಳನ್ನು ಸಂಗ್ರಹಿಸಿ ಇಟ್ಟಿದ್ದ ದಾಂಡೇಲಿಯ ಗಾಂಧೀನಗರದ ವ್ಯಕ್ತಿಯನ್ನು ಅರಣ್ಯ ಇಲಾಖೆ ಸಿಬ್ಬಂಧಿಗಳು ಬಂಧಿಸಿದ್ದಾರೆ.

ಬಂಧಿತನನ್ನು ಪಕ್ರುಸಾಬ್ ಶೇಖ್ ಎಂದು ಗುರುತಿಸಲಾಗಿದ್ದು, ಬಂಧಿತನಿಂದ ಕಾಡುಕೋಣ ಮತ್ತು ಜಿಂಕೆಯ ಕೊಂಬನ್ನು ವಷಪಡಿಸಿಕೊಳ್ಳಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದಾಂಡೇಲಿಯ ಮನೆಯೊಂದರಲ್ಲಿ ಅಕ್ರಮವಾಗಿ ವನ್ಯ ಪ್ರಾಣಿಗಳ ಅವಶೇಷಗಳನ್ನು ಸಂಗ್ರಹಿಸಿ ಇಟ್ಟಿರುವ ಕುರಿತಂತೆ ಪೋಲಿಸರಿಗೆ ಮಾಹಿತಿ ಲಭ್ಯವಾಗಿದ್ದ ಹಿನ್ನೆಲೆಯಲ್ಲಿ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತಕುಮಾರ್ ರವರ ನೇತೃತ್ವದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಡಾ.ಸಂತೋಷ ಚೌಹಾಣ್ ರವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಅರಣ್ಯ ಇಲಾಖೆ ಧಾಳಿ ನಡೆಸಿದ್ದ ಸಂದರ್ಭದಲ್ಲಿ ಆರೋಪಿಯ ಮನೆಯಲ್ಲಿ ಕಾಡುಕೋಣ ಮತ್ತು ಜಿಕೆ ಕೊಂಬು ಕಂಡುಬಂದಿದ್ದು, ಇದನ್ನು ವಷಪಡಿಸಿಕೊಳ್ಳಲಾಗಿದ್ದು ಶಂಕಿತ ಆರೋಪಿಯ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.