ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನ ರಾಮನಗರ- ಗೋವಾ ರಾಷ್ಟ್ರೀಯ ಹೆದ್ದಾರಿಯ ಜಲ್ಕಟ್ಟಿ ಹತ್ತಿರ ಪ್ರವಾಸಿಗರನ್ನು ಕರೆದುಕೊಂಡು ಹೋಗುತ್ತಿದ್ದ ಟಿ.ಟಿ.ವಾಹನವೊಂದು ಪಲ್ಟಿಯಾಗಿ ಚಾಲಕ ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ.
ರಾಮನಗರ- ಗೋವಾ ರಾಷ್ಟ್ರೀಯ ಹೆದ್ದಾರಿಯ ಜಲ್ಕಟ್ಟಿ ಹತ್ತಿರ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಚಾಲಕ ಬೆಂಗಳೂರು ಮೂಲದ ಪ್ರಜ್ವಲ್ ಎಂಬುವವರು ಗಂಭೀರ ಗಾಯಗೊಂಡಿದ್ದು, ವಾಹನದಲ್ಲಿದ್ದ ಪ್ರವಾಸಿಗರಿಗೆ ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳಾಗಿದ್ದು,ಗಾಯಾಳುಗಳನ್ನು ರಾಮನಗರದ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ ಮೂಲಕ ದಾಖಲಿಸಲಾಗಿದೆ. ಸ್ಥಳಕ್ಕೆ ರಾಮನಗರ ಪೋಲಿಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
