ಸುದ್ದಿ ಕನ್ನಡ ವಾರ್ತೆ
. ಜೋಯಿಡಾ:ತಾಲೂಕಿನ ರಾಮನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಮೈದಾನದಲ್ಲಿ ಶುಕ್ರವಾರ ವ್ಯಕ್ತಿಯೊಬ್ಬರ ಮೃತ ದೇಹ ಸಿಕ್ಕಿದೆ.
ಬೆಳಿಗ್ಗೆ ಮೃತ ದೇಹ ನೋಡಿದ ಜನ ಪೋಲಿಸರಿಗೆ ಮಾಹಿತಿ ನೀಡಿದ್ದಾರೆ. ಮೃತಪಟ್ಟ ವ್ಯಕ್ತಿಯು ತಾಲೂಕಿನ ಕುಂಬಾರವಾಡದ ನಿವಾಸಿ ಉಮೇಶ ನಾಯ್ಕ ಎಂದು ತಿಳಿದು ಬಂದಿದೆ.
ಇವರು ವಾಹನ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.ಶುಕ್ರವಾರ ಬೆಳಗಿನ ಜಾವ ಸಾರ್ವಜನಿಕರು ವಾಯುವಿಹಾರಕ್ಕೆ ಹೋದ ಸಮಯದಲ್ಲಿ ಮೃತ ದೇಹ ಪತ್ತೆಯಾದ ಬಗ್ಗೆ ತಿಳಿದು ಬಂದಿದೆ.ರಾಮನಗರ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ,ಮುಂದಿನ ಕ್ರಮ ಕೈಗೊಂಡಿದ್ದಾರೆ.

 
							 
			 
			 
			 
			 
		 
			 
			 
			