ಸುದ್ದಿ ಕನ್ನಡ ವಾರ್ತೆ

ಜೋಯಿಡಾ:ತಾಲೂಕಿನ ಕಾತೇಲಿ(ಕುಂಬಾರವಾಡ)ಗ್ರಾಮ ಪಂಚಾಯತ ವ್ಯಾಪ್ತಿಯ ಕೊಂದರ ಗ್ರಾಮದ ಕೊಂದರ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಎರಡು ದಿನಗಳ ಶಾರದೋತ್ಸವ ಕಾರ್ಯಕ್ರಮ ಯಶಸ್ವಿ ಸಂಪನ್ನಗೊಂಡಿತು.

ಪಾಲಕರು,ಪೋಷಕರು,ಶಿಕ್ಷಕರು ಮಕ್ಕಳು ಸೇರಿ ಮಾಡಿದ ಅಲಂಕೃತ ಮಂಟಪದಲ್ಲಿ ವಿದ್ಯಾ ದೇವತೆಯಾದ ಸರಸ್ವತಿ ದೇವಿಯ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಭಕ್ತಿ,ಭಾವದಿಂದ ಪೂಜೆ ಆರತಿ,ಭಜನೆಯನ್ನು ಮಾಡಿ ತೀರ್ಥ ಪ್ರಸಾದ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಕ್ಕಳಿಗೆ,ಪಾಲಕರಿಗೆ,ಪೋಷಕರಿಗೆ ಶಾಲೆಯ ಹಳೆ ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಎರಡನೇಯ ದಿನ ಮಧ್ಯಾಹ್ನ ಅನ್ನಪ್ರಸಾದ ಸೇವೆಯನ್ನು ಊರಿನ ಗ್ರಾಮಸ್ಥರು ಮಾಡಿದ್ದರು. ಮೂರ್ತಿ ವಿಸರ್ಜನೆಯ ವೇಳೆ ಯುವತಿ,ಮಹಿಳೆಯರಿಂದ ಪುಗುಡಿ ನೃತ್ಯದ ಜೊತೆ ಹಾಡುಗಳು,ಮಕ್ಕಳು,ಯುವಕರು,ಪುರುಷರಿಂದ ಆರತಿ,ಭಜನಾ ಕಾರ್ಯಕ್ರಮಗಳು ನಡೆದವು. ಶಾಲೆಯ ಮುಖ್ಯ ಶಿಕ್ಷಕರಾದ ಈರಣ್ಣ ಪಗಡಿಯವರ ಮಾರ್ಗ ದರ್ಶನದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಶಾಣು ಕೋಲಕರ,ಉಪಾಧ್ಯಕ್ಷರು,ಸರ್ವ ಸದಸ್ಯರು,ಪಾಲಕರು,ಪೋಷಕರು ಶಾಲೆಯ ಹಳೆ ವಿದ್ಯಾರ್ಥಿಗಳು, ಊರಿನ ಹಿರಿಯರು, ಮಾತೆಯರು,ಗಣ್ಯರು,ಶಿಕ್ಷಣ ಪ್ರೇಮಿಗಳು,ಸಹ ಶಿಕ್ಷಕರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.ಮಳೆಯ ಕಾರಣ ಸಂಜೆಯ ವೇಳೆ ಸಾಂಸ್ಕೃತಿಕ ಕಾರ್ಯಕ್ರಮ ಇಟ್ಟುಕೊಳ್ಳದೇ ಸರಳವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಒಟ್ಟಿನಲ್ಲಿ ಕೊಂದರ ಗ್ರಾಮದ ಶಾಲಾ ಪರಿಸರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.

ಶಾಲಾ ಸುತ್ತಮುತ್ತಲಿನ ಗ್ರಾಮದ ಶಿಕ್ಷಕ ಮಿತ್ರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಶ್ರೀದೇವಿಯ ದರ್ಶನ ಭಾಗ್ಯ ಪಡೆದು ಪುನೀತರಾದರು.