ಸುದ್ದಿ ಕನ್ನಡ ವಾರ್ತೆ
ಕಾರವಾರ:ತಾಲೂಕಿನ ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳು ಕಾರು ಮತ್ತು ಬೈಕ್ ಗಳ ನಡುವೆ ಡಿಕ್ಕಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ. ಅರಗಾದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿಯ ಕೋಸ್ಟ್ ಗಾರ್ಡ ಕಚೇರಿಯ ಮುಂದೆ ರಾತ್ರಿಯ ವೇಳೆ ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರರಿಗೆ ಗಂಭೀರ ಗಾಯ ವಾಗಿದೆ.ಅಂಕೋಲಾ ಕಡೆಯಿಂದ ಬಂದ ಕಾರು ಡಿಕ್ಕಿ ಹೊಡೆದ ಕಾರಣ ಅಪಘಾತದಲ್ಲಿ ಬೈಕ್ ಸವಾರ ಹಾಗೂ ಹಿಂಬದಿಯಲ್ಲಿ ಕುಳಿತಿದ್ದ ಬಾಲಕಿಯ ತಲೆ,ಮುಖ, ಕೈ,ಕಾಲುಗಳಿಗೆ ಗಂಭೀರ ಸ್ವರೂಪದ ಪೆಟ್ಟಾಗಿದ್ದು,ಸ್ಥಳೀಯರ ಸಹಕಾರದಲ್ಲಿ ಗಾಯಾಳುಗಳನ್ನು ಜಿಲ್ಲಾಸ್ಪತ್ರಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮತ್ತೊಂದು ಅಪಘಾತವು ತೋಡೂರು ಗ್ರಾಮ ಪಂಚಾಯತ ಕಾರ್ಯಾಲಯದ ಮಂದೆ ಮುಂಜಾನೆ ಸಂಭವಿಸಿದೆ.
ಅಂಕೋಲಾದ ಕಡೆಯಿಂದ ಕಾರವಾರಕ್ಕೆ ಬರುತ್ತಿದ್ದ ಕಾರೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಹಾಗೂ ಸ್ಕೂಟಿಯ ಮುಂಭಾಗ ನುಜ್ಜುಗುಜ್ಜಾಗಿದೆ. ಕಾರವಾರ ಗ್ರಾಮೀಣ ಪೋಲಿಸ ಸ್ಟೇಷನನಲ್ಲಿ ಪ್ರಕರಣ ದಾಖಲಾಗಿದೆ.
