ಸುದ್ದಿ ಕನ್ನಡ ವಾರ್ತೆ
ದಾಂಡೇಲಿ:ನಗರದ ಅಂಬೇವಾಡಿಯಲ್ಲಿಯ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ(ಇಂದು )ಅ.30 ರ ಗುರುವಾರ ಸಾಯಂಕಾಲ 4 ಗಂಟೆಗೆ ಸಾರಿಗೆ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ದಾಂಡೇಲಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಅವಿನಾಶ ಕಾವೇರಿಯವರು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ವಾಹನಗಳ ಮಾಲೀಕರು, ಚಾಲಕರು ಹಾಗೂ ಸಾರ್ವಜನಿಕರು ಸಾರಿಗೆ ಅದಾಲತ್ ನಲ್ಲಿ ಭಾಗವಹಿಸಿ ತಮ್ಮ ಸಮಸ್ಯೆ ಮತ್ತು ಕುಂದುಕೊರತೆಗಳನ್ನು ಇತ್ಯರ್ಥ ಪಡಿಸಕೊಳ್ಳಬಹುದು ಎಂದು ತಿಳಿಸಿದ್ದಾರೆ.
