ಸುದ್ದಿ ಕನ್ನಡ ವಾರ್ತೆ
. ಮುಂಡಗೋಡ:ತಾಲೂಕಿನ ಮಳಗಿ ಬಳಿ ಶಿರಸಿಯಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಸರ್ಕಾರಿ ಬಸ್ಸೊಂದು ಸ್ಟೇರಿಂಗ್ ಕಟ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಗಟಾರಕ್ಕೆ ಬಿದ್ದ ಘಟನೆ ನಡೆದಿದೆ.
ಶಿರಸಿಯಿಂದ ಹುಬ್ಬಳ್ಳಿಯ ಕಡೆ ಹೊರಟ್ಟಿದ ಬಸ್ ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು,ಅದೃಷ್ಟ ವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಎಲ್ಲರೂ ಪಾರಾಗಿದ್ದಾರೆ ಎಂದು ಮಾಹಿತಿ ಇದೆ.ಘಟನೆ ನಡೆದ ತಕ್ಷಣ ಸ್ಥಳೀಯರು ಧಾವಿಸಿ ಬಸ್ ನಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿದ್ದಾರೆ.

 
							 
			 
			 
			 
			 
		 
			 
			 
			 
			