ಸುದ್ದಿ ಕನ್ನಡ ವಾರ್ತೆ
ಮುಂಬೈ:ನಗರದ ಡಿ.ವೈ.ಪಾಟೀಲ ಕ್ರೀಡಾಂಗಣದಲ್ಲಿ ಗುರುವಾರ ರಾತ್ರಿ ನಡೆದ ಮಹಿಳಾ ವಿಶ್ವಕಪ್ ಟೂರ್ನಿಯ ಎರಡನೇಯ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ 5 ವಿಕೆಟ್ ಗಳಿಂದ ಸೋಲಿಸಿ ಪೈನಲ್ ಗೆ ಲಗ್ಗೆ ಇಟ್ಟಿತು. ಪಂದ್ಯದ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡವು ನಿಗದಿತ 50 ಓವರಗಳಲ್ಲಿ 338 ರನ್ ಗಳಿಸಿ ಆಲೌಟ್ ಆಗಿತ್ತು.
ಆಸೀಸ್ ನೀಡಿದ ಬೃಹತ್ ಗುರಿಯನ್ನು ಬೆನ್ನಟ್ಟಿದ ಭಾರತ ತಂಡದ ಜೆಮಿಯಾ ರೋಡ್ರಿಗಸ್ ಅವರ ಆಕರ್ಷಕ ಶತಕ (127) ನಾಯಕಿ ಹರ್ಮನ್ ಪ್ರೀತ್ ಕೌರ ಅವರ ಅರ್ಧ ಶತಕ (89)ಇನ್ನುಳಿದ ಆಟಗಾರರ ನೆರವಿನಿಂದ 48.3 ಓವರಗಳಲ್ಲಿ ಇನ್ನೂ 9 ಎಸೆತಗಳು ಬಾಕಿ ಇರುವಂತೆ ಗೆಲುವಿನ ನಗೆ ಬೀರಿತು.
ಜೆಮಿಯಾ ರೋಡ್ರಿಗಸ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾದರು.ಮೊದಲ ಬಾರಿಗೆ ವಿಶ್ವ ಚಾಂಪಿಯನ್ ಪಟ್ಟಕ್ಕೇರುವ ಕನಸು ಕಾಣುತ್ತಿರುವ ಭಾರತ ತಂಡವು ಪೈನಲ್ ನಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ಸೆಣಸಾಟ ನಡೆಸಲಿದೆ.ಭಾರತ ವನಿತೆಯರ ಕ್ರಿಕೆಟ್ ತಂಡವು ವಿಶ್ವಕಪ್ ಗೆಲ್ಲಲಿ ಎಂಬುದು ಕೋಟ್ಯಾಂತರ ಭಾರತೀಯರ ಹಾರೈಕೆ.

 
							 
			 
			 
			 
			 
		 
			 
			 
			 
			