ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನ ಅವೇಡಾ ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಅವೇಡಾದಲ್ಲಿ ಸಡಗರ ಸಂಭ್ರಮದಿಂದ 70ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.
ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕನ್ನಡಮ್ಮ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.ಪುಷ್ಪದಿಂದ ಅಲಂಕೃತ ಕರ್ನಾಟಕ ರಾಜ್ಯದ ನಕ್ಷೆಯು ಗಮನ ಸೆಳೆಯಿತು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ರೋಹಿದಾಸ ಮಡಿವಾಳ ಮಾತನಾಡಿ ಕನ್ನಡ ರಾಜ್ಯೋತ್ಸವದ ಆಚರಣೆಯ ಹಿನ್ನಲೆ,ಉದ್ದೇಶ,ಬಾಷೆ,ಕನ್ನಡ ಸಾಹಿತ್ಯ,ಸಂಸ್ಕೃತಿಯ ಕುರಿತು ಮಾತನಾಡಿದರು,ಸಹ ಶಿಕ್ಷಕಿಯರಾದ ಉಷಾ ಜೋಶಿ,ದೀಪಾ ನಾಯ್ಕ ಕಾರ್ಯಕ್ರಮದಲ್ಲಿ ಕನ್ನಡ ರಾಜ್ಯೋತ್ಸವದ ಕುರಿತು ಮಾತನಾಡಿ, ಸ್ವಾಗತಿಸಿ,ನಿರೂಪಿಸಿ,ವಂದಿಸಿದರು.ಶಾಲೆಯ ವಿದ್ಯಾರ್ಥಿಗಳು ಕನ್ನಡ ಭಾಷೆಯ ಕುರಿತು ಭಾಷಣ ಗೀತೆಗಳನ್ನು ಹಾಡಿದರು.
