ಸುದ್ದಿ ಕನ್ನಡ ವಾರ್ತೆ

. ಜೋಯಿಡಾ:ತಾಲೂಕಿನ ನಂದಿಗದ್ದೆ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಪಂಚಾಯತ ಅಧ್ಯಕ್ಷರು,ಉಪಾಧ್ಯಕ್ಷರು,ಸದಸ್ಯರು,ಗ್ರಾಮ ಪಂಚಾಯತ ಕಾರ್ಯದರ್ಶಿ,ಸಿಬ್ಬಂದಿ ವರ್ಗದವರು,ಹರಿಪ್ರಿಯ ಸಂಜೀವಿನಿ ಗ್ರಾಮ ಪಂಚಾಯತ ಒಕ್ಕೂಟದ ಅಧ್ಯಕ್ಷೆ,ಪದಾಧಿಕಾರಿಗಳು ಕನ್ನಡಾಂಬೆ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಗ್ರಾಮ ಪಂಚಾಯತ ಪ್ರತಿನಿಧಿಗಳು, ಸಿಬ್ಬಂದಿ ವರ್ಗ,ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಪ್ರೌಢಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು,ಅಂಗನವಾಡಿ ಕಾರ್ಯಕರ್ತೆಯರು ಮೆರವಣಿಗೆಯಲ್ಲಿ ವಾದ್ಯಗಳ,ಕನ್ನಡದ ಘೋಷಣೆಯುಳ್ಳ ಭಿತ್ತಿಪತ್ರಗಳ ಜೊತೆ ಹೆಜ್ಜೆ ಹಾಕಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಅರುಣ ದೇಸಾಯಿ, ಉಪಾಧ್ಯಕ್ಷೆ ದಾಕ್ಷಾಯಣಿ ದಾನಶೂರ, ಸದಸ್ಯರಾದ ಧವಳೋ ಗಣೇಶ ಸಾವರ್ಕರ್,ಶೋಭಾ ಆರ್,ಗ್ರಾಮ ಪಂಚಾಯತ ಕಾರ್ಯದರ್ಶಿ ಗಜಾನನ ಸಾವರ್ಕರ್, ಸಂಜೀವಿನಿ ಗ್ರಾಮ ಪಂಚಾಯತ ಒಕ್ಕೂಟದ ಅಧ್ಯಕ್ಷೆ ಸುಕನ್ಯಾ ದೇಸಾಯಿ, ಎಂ.ಬಿ.ಕೆ ಭಾರತಿ ಹೆಗಡೆ,ಕೃಷಿ ಸಖಿ ಉಷಾ ದೇಸಾಯಿ,ಸ್ವಸಹಾಯ ಸಂಘಗಳ ಸದಸ್ಯರು,ಅರಣ್ಯ ಇಲಾಖೆಯ ಉಪವಲಯ ಅರಣ್ಯಾಧಿಕಾರಿ ದಯಾನಂದ,ಪರಂಪರಾಗತ ಕೃಷಿ ವಿಕಾಸ ಯೋಜನೆಯ ಅಮರ ಭಾಗವತ,ಅರಣ್ಯ ಇಲಾಖೆಯ ಸಿಬ್ಬಂದಿಗಳು,ಗ್ರಾಮ ಪಂಚಾಯತ ಪಂಚಾಯತ ಸಿಬ್ಬಂದಿಗಳು ಇದ್ದರು.