ಸುದ್ಧಿಕನ್ನಡ ವಾರ್ತೆ
ಪಣಜಿ: ಗೋವಾ ರಾಜ್ಯವು ಸದ್ಯ ಜಗತ್ತಿನ ಸಿನಿ ರಸಿಕರ ಆಕರ್ಷಣೀಯ ಕೇಂದ್ರವಾಗುತ್ತಿದೆ. ಪ್ರಸಕ್ತ ನವೆಂಬರ್ 20 ರಿಂದ 28 ರವರೆಗೆ ಗೋವಾದಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಸಿದ್ಧತಾ ಕಾರ್ಯ ಭರದಿಂದ ಸಾಗಿದೆ.
ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಉಧ್ಘಾಟನಾ ಸಮಾರಂಭವು ಗೋವಾ ಬಾಂಬೋಲಿಂ ಬಳಿಯ ಶಾಮಪ್ರಸಾದ ಮುಖರ್ಜಿ ಸ್ಟೇಡಿಯಂನಲ್ಲಿ ನವೆಂಬರ್ 20 ರಂದು ಸಂಜೆ ನಡೆಯಲಿದೆ. ಚಲನಚಿತ್ರೋತ್ಸವಕ್ಕೆ ಇನ್ನೂ ಕೇವಲ 15 ದಿನ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಗೋವಾ ರಾಜಧಾನಿ ಪರಿಸರದಲ್ಲಿ ಸಿದ್ಧತಾ ಕಾರ್ಯ ಭರದಿಂದ ಸಾಗಿದೆ.
ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪಾಲ್ಗೊಳ್ಳಲು ಪ್ರತಿನಿಧಿಗಳ ಆನ್ ಲೈನ್ ನೋಂದಣಿ ಆರಂಭಗೊಂಡಿದೆ. ಚಲನಚಿತ್ರೋತ್ಸವದಲ್ಲಿ 70 ಕ್ಕೂ ಹೆಚ್ಚು ದೇಶಗಳ ಚಲನಚಿತ್ರಗಳು ಪ್ರದರ್ಶನಗೊಳ್ಳಲಿದೆ.
ಜಗತ್ತಿನ ವಿವಿಧ ದೇಶಗಳ ಆಯ್ದ ಅತ್ಯುತ್ತಮ ಚಲನಚಿತ್ರಗಳು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿದೆ.
