ಸುದ್ದಿ ಕನ್ನಡ ವಾರ್ತೆ

. ಕಾರವಾರ:ನಗರದ ರಾಷ್ಟ್ರೀಯ ಹೆದ್ದಾರಿ 66 ರ ಆರ್.ಟಿ.ಓ ಕಚೇರಿಯ ಬಳಿ ಬೈಕ್ ಹಾಗೂ ಸ್ಕೂಟಿಯ ನಡುವೆ ಅಪಘಾತ ಸಂಭವಿಸಿದೆ.ಘಟನೆಯಲ್ಲಿ ಓರ್ವ ಸ್ಥಳದಲ್ಲಿ ಸಾವನ್ನಪ್ಪಿದ್ದಾನೆ.

ಯಲ್ಲಾಪುರ ತಾಲೂಕಿನ ಇಡಗುಂದಿಯ ನಿವಾಸಿ ಚಿರಂಜೀವಿ ಬೃಹ್ಮಾನಂದ ಕುಂಜಿ(15) ಮೃತ ದುರ್ದೈವಿ.ಮಾಜಾಳಿಯಲ್ಲಿ ತಾಯಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ.ಬಾಲಕ ತನ್ನ ತಾಯಿಯೊಂದಿಗೆ ಸ್ಕೂಟಿಯಲ್ಲಿ ಕಾರವಾರದ ಕಡೆ ಬರುತ್ತಿದ್ದಾಗ ಹಿಂಬದಿಯಿಂದ ಬುಲೆಟ್ ಬೈಕ್ ಡಿಕ್ಕಿ ಹೊಡೆದಿದೆ.ಪರಿಣಾಮ ಓರ್ವ ಸಾವನ್ನಪ್ಪಿದ್ದು,ಘಟನೆಯಲ್ಲಿ ಬುಲೆಟ್ ಮೇಲಿದ್ದ ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಇದರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ. ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರಿಂದ ಅಂಬ್ಯುಲೆನ್ಸ್ ಮೂಲಕ ಮೃತದೇಹ ಹಾಗೂ ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ.ಕಾರವಾರ ಸಂಚಾರಿ ಪೋಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.