ಸುದ್ಧಿಕನ್ನಡ ವಾರ್ತೆ

ಬೆಂಗಳೂರು: ಮುಡಾ ಹಗರಣವು ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರ ಕುರ್ಚಿ ಅಲುಗಾಡುವಂತೆ ಮಾಡಿದೆ. ಇದೀಗ ಸಿಎಂ ಸಿದ್ಧರಾಮಯ್ಯ ವಿರುದ್ಧ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಇದರಿಂದಾಗಿ ಸಿದ್ಧರಾಮಯ್ಯ ರವರ ಕೊರಳಿಗೆ ಸುತ್ತಿಕೊಂಡಿರುವ ಉರುಳು ಇನ್ನಷ್ಟು ಬಿಗಿಯಾಗುವಂತೆ ಮಾಡಿದೆ.

ಮೇಲ್ನೋಟಕ್ಕೆ ಸಿಎಂ ಸಿದ್ಧರಾಮಯ್ಯ ನಾನು ತಪ್ಪು ಮಾಡಿಲ್ಲ ರಾಜೀನಾಮೆ ಕೊಡಲ್ಲ ಎಂದು ಗಟ್ಟಿಯಾಗಿ ಹೇಳುತ್ತಿದ್ದರೂ ಕೂಡ ಒಳಗೊಳಗೆ ಸಿಎಂಗೆ ಆತಂಕ ಹೆಚ್ಚಿದಂತೆ ಕಂಡುಬರುತ್ತಿದೆ. ಸಿದ್ಧರಾಮಯ್ಯ ವಿರುದ್ಧ ಎಫ್ ಐ ಆರ್ ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಪೋಲಿಸರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ ಆದೇಶ ನೀಡಿದ ಹಿನ್ನೆಲೆಯಲ್ಲಿ ಶುಕ್ರವಾರ ಮೈನೂರಿನ ಲೋಕಾಯುಕ್ತದಲ್ಲಿ ಸಿದ್ಧು ವಿರುದ್ಧ ಪ್ರಕರಣ ದಾಖಲಾಗಿದೆ. ಈ ಮೂಲಕ ಸಿದ್ಧರಾಮಯ್ಯ ಕೊರಳಿಗೆ ಸುತ್ತಿಕೊಂಡಿರುವ ಮೂಡಾ ಉರುಳು ಇದೀಗ ಮತ್ತಷ್ಟು ಬಿಗಿಯಾಗ ತೊಡಗಿದೆ.

ರಾಜ್ಯಪಾಲರು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಶನ್ ಗೆ ನೀಡಿದ್ಧ ಅನುಮತ್ತಿಯನ್ನು ಉಚ್ಛ ನ್ಯಾಯಾಲಯ ಎತ್ತಿ ಹಿಡಿದ ಹಿನ್ನೆಲೆಯಲ್ಲಿ ಲೋಕಾಯುಕ್ತರು ಸಿಎಂ ಸಿದ್ಧು ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ.