ಸುದ್ಧಿಕನ್ನಡ ವಾರ್ತೆ
ಪಣಜಿ: ಗೋವಾದಲ್ಲಿ ಕನ್ನಡ ಶಾಲೆಗಳು ಮುಚ್ಚುತ್ತಿರುವ ಸಂದರ್ಭದಲ್ಲಿ ಕನ್ನಡ ಶಾಲೆಗಳನ್ನು ಉಳಿಸಲು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಗೋವಾದಲ್ಲಿ ಕನ್ನಡ ಶಾಲೆಗಳಿಗೆ ಆಧುನಿಕತೆಯ ಶಿಕ್ಷಣ ತರಗತಿಗಳನ್ನು ನಡೆಸಲು ಅಗತ್ಯ ಸಹಾಯ ಸಹಕಾರ ನೀಡುತ್ತಿದೆ.

ಗೋವಾದ ವಾಸ್ಕೊ ಝರಿ ಜುವಾರಿನಗರದಲ್ಲಿರುವ ಸರ್ಕಾರಿ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಗೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ಸ್ಮಾರ್ಟ ಕ್ಲಾಸ್ ರೂಂ ವ್ಯವಸ್ಥೆ ಮಾಡಿದೆ. ಇದಕ್ಕೆ ಅಗತ್ಯವಿರುವಂತಹ ಸ್ಮಾರ್ಟ ಟೀವಿ ಸ್ಕ್ರೀನ್ ವ್ಯವಸ್ಥೆಯನ್ನು ಕೂಡ ಪ್ರಾಧಿಕಾರ ಮಾಡಿದೆ.
ಇದರಿಂದಾಗಿ ಅಧುನಿಕತೆಯ ವ್ಯವಸ್ಥೆಯಿಲ್ಲದೆಯೇ ಇದ್ದ ಕನ್ನಡ ಮಾಧ್ಯಮ ಶಾಲೆಗೆ ಆಧುನಿಕತೆಯ ಶಿಕ್ಷಣ ವ್ಯವಸ್ಥೆ ಕಲ್ಪಿಸುವ ಮೂಲಕ ಕನ್ನಡ ಶಾಲೆಗೆ ಮುಂಬರುವ ವರ್ಷಗಳಲ್ಲಿ ಹೆಚ್ಚು ಮಕ್ಕಳನ್ನು ಆಕರ್ಷಿಸುವ ಸಾಧ್ಯತೆಯಿದೆ. ಮುಂಬರುವ ದಿನಗಳಲ್ಲಿ ಗೋವಾದಲ್ಲಿರುವ ಇನ್ನುಳಿದ ಕನ್ನಡ ಶಾಲೆಗಳಿಗೂ ಕೂಡ ಸ್ಮಾರ್ಟ ಕ್ಲಾಸ್ ವ್ಯವಸ್ಥೆ ಕಲ್ಪಿಸುವ ಭರವಸೆಯನ್ನು ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ್ ಹಾಗೂ ಕಾರ್ಯದರ್ಶಿಗಳಾದ ಪ್ರಕಾಶ ಮತ್ತೀಹಳ್ಳಿ ಭರವಸೆ ನೀಡಿದ್ದಾರೆ.
ವಾಸ್ಕೊ ಜುವಾರಿ ನಗರ ಝರಿಯ ಕನ್ನಡ ಮಾಧ್ಯ,ಮ ಶಾಲೆಯಲ್ಲಿ ಸ್ಮಾರ್ಟ ಕ್ಲಾಸ್ ನ್ನು ಮಂಗಳವಾರ ಪ್ರಾಧಿಕಾರದ ಅಧ್ಯಕ್ಷರು ಉಧ್ಘಾಟನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ್ , ಕಾರ್ಯದರ್ಶಿಗಳಾದ ಪ್ರಕಾಶ ಮತ್ತೀಹಳ್ಳಿ, ಪ್ರಾಧಿಕಾರದ ಸದಸ್ಯರು, ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷ ಸಿದ್ಧಣ್ಣ ಮೇಟಿ, ಗೋವಾ ಬಿಜೆಪಿ ಕರ್ನಾಟಕ ಸೆಲ್ ಕನ್ವೀನರ್ ಮುರಳಿ ಮೋಹನ್ ಶೆಟ್ಟಿ, ಗೋವಾ ಬಿಜೆಪಿ ಕರ್ನಾಟಕ ಸೆಲ್ ನ ರಾಜೇಶ್ ಶೆಟ್ಟಿ, ಗೋವಾ ಕನ್ನಡ ಸಮಾಜದ ಅಧ್ಯಕ್ಷ ಅರುಣಕುಮಾರ್, ಕರ್ನಾಟಕ ರಕ್ಷಣಾ ವೇದಿಕೆಯ ಗೋವಾ ರಾಜ್ಯ ಸಂಸ್ಥಾಪಕ ಅಧ್ಯಕ್ಷ ಮಂಜುನಾಥ ನಾಟೀಕರ್, ಜುವಾರಿನಗರ ಕನ್ನಡ ಸಂಘದ ಅಧ್ಯಕ್ಷ ಶಿವಾನಂದ ಬಿಂಗಿ ಸೇರಿದಂತೆ ವಿವಿಧ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕನ್ನಡ ಶಾಲೆಯ ಮಕ್ಕಳಿಗೆ ಸ್ಮಾರ್ಟ ಕ್ಲಾಸ್ ವ್ಯವಸ್ಥೆ ಕಲ್ಪಿಸಿಕೊಟ್ಟಿದ್ದಕ್ಕೆ ಶಾಲೆಯ ಮುಖ್ಯಾಧ್ಯಾಪಕರು ಹಾಗೂ ಶಿಕ್ಷಕರು ಪ್ರಾಧಿಕಾರಕ್ಕೆ ಧನ್ಯವಾದ ಸಲ್ಲಿಸಿದರು.
