ಸುದ್ದಿ ಕನ್ನಡ ವಾರ್ತೆ

. ಶಿರಸಿ:ನಗರದಲ್ಲಿರುವ ಎಂ.ಇ.ಎಸ್. ಕಾನೂನು ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಸಂವಿಧಾನ ದಿನಾಚರಣೆಯ ಮಹತ್ವದ ಕಾರ್ಯಕ್ರಮದಲ್ಲಿ ಮಾನ್ಯ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಭಾಗವಹಿಸಿ, ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಹಾಗೂ ಸಂವಿಧಾನದ ಪವಿತ್ರ ಗ್ರಂಥಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಸಂವಿಧಾನದ ಮಹೋನ್ನತ ಮೌಲ್ಯಗಳು ಮತ್ತು ಪ್ರಜಾಪ್ರಭುತ್ವದ ಆಶಯಗಳ ಕುರಿತು ಮಾತನಾಡಿದರು.

ಈ ಸಂದರ್ಭದಲ್ಲಿ ಎಂಇಎಸ್ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಜಿ.ಎಂ. ಹೆಗಡೆ ಮುಳುಖಂಡ, ಎಂಇಎಸ್ ಉಪಸಮಿತಿಯ ಅಧ್ಯಕ್ಷರಾದ ಶ್ರೀ ನರೇಂದ್ರ ಹೊಂಡಗಾಶಿ, ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಅಶೋಕ್ ಭಟ್ಕಳರವರು ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.