ಸುದ್ದಿ ಕನ್ನಡ ವಾರ್ತೆ

. ಜೋಯಿಡಾ:ತಾಲೂಕಿನ ಪ್ರಧಾನಿ ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಬಾಮಣಗಿ ಶಾಲೆಯಲ್ಲಿ ಸಂವಿಧಾನ ದಿನಾಚರಣೆ,ಕಾನೂನು ಅರಿವು ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕ ವೃಂದದವರು,ಮಕ್ಕಳು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಶಾಲೆಯ ಮುಖ್ಯ ಶಿಕ್ಷಕರಾದ ಕಿರಣ ಕುಮಾರ ನಾಯ್ಕ ಮಾತನಾಡಿ ಸಂವಿಧಾನ ದಿನದ ಮಹತ್ವ, ಉದ್ದೇಶ,ಸಂವಿಧಾನ ರಚನೆ, ಕಾನೂನು ಕುರಿತು ಮಕ್ಕಳಿಗೆ ಉಪಯುಕ್ತ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಸಹ ಶಿಕ್ಷಕರಾದ ಬಿ.ಚವ್ಹಾಣ,ವಂದನಾ ದೇಶಪಾಂಡೆ,ಪಿಲೋಮೀನ ನರೋನ,ಸುಮನಾ ಇದ್ದರು.ಈ ಸಂದರ್ಭದಲ್ಲಿ ಸಂವಿಧಾನ ಪ್ರಸ್ತಾವನೆಯನ್ನು ಸಾಮೂಹಿಕವಾಗಿ ಓದಲಾಯಿತು.ಬಾಮಣಗಿ ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುಭಾಷ ಗಾಂವ್ಕರರವರ ಉಪಸ್ಥಿತಿಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನೀಡಲಾಗುವ ಸ್ಯಾಂಡಲ್ ನ್ನು ಮಕ್ಕಳಿಗೆ ವಿತರಿಸಲಾಯಿತು.ಸಹ ಶಿಕ್ಷಕಿ ಸುಮನಾ ಕಾರ್ಯಕ್ರಮದ ಸ್ವಾಗತ,ನಿರೂಪಣೆ, ವಂದನಾರ್ಪಣೆ ನಿರ್ವಹಿಸಿದರು.