Banner Ad

ಸುದ್ದಿ ಕನ್ನಡ ವಾರ್ತೆ

ಜೋಯಿಡಾ:ತಾಲೂಕಿನ ಬಾಬು ಜಗಜೀವನರಾಮ ಭವನದಲ್ಲಿ ಜಿಲ್ಲಾ ಆಡಳಿತ,ಜಿಲ್ಲಾ ಪಂಚಾಯತ ಉತ್ತರಕನ್ನಡ,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉತ್ತರಕನ್ನಡ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರ ಜೋಯಿಡಾ ತಾಲೂಕಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಗುಂದ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಬಾಲಕಿಯರ ವಿಭಾಗದಲ್ಲಿ ನಿಖಿತಾ ಎಮ್ ವೇಳಿಪ ಪ್ರಥಮ,ರಾಧಿಕಾ ಆರ್ ಪಟಗಾರ ದ್ವಿತೀಯ ಸ್ಥಾನ ಪಡೆದಿರುತ್ತಾರೆ.

Banner Ad

ಬಾಲಕರ ವಿಭಾಗದ ಲ್ಲಿ ರಾಜೇಶ ಸಾವರಕರ ತೃತೀಯ ಸ್ಥಾನ ಪಡೆದಿರುತ್ತಾನೆ.ಇವರಿಗೆ ಗುಂದ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಫಕೀರಪ್ಪ ದರಿಗೊಂಡ ತರಬೇತಿ, ಮಾರ್ಗದರ್ಶನ ನೀಡಿರುತ್ತಾರೆ. ಇವರ ಸಾಧನೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ತುಕಾರಾಮರವರು, ಜೋಯಿಡಾ ಗ್ರಾಮ ಪಂಚಾಯತ ಉಪಾಧ್ಯಕ್ಷರಾದ ಸಂತೋಷ ಮಂತೆರೋ,ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಶೀರ್ ಅಹ್ಮದ ಶೇಖ,ತಾಲೂಕಾ ದೈಹಿಕ ಶಿಕ್ಷಣ ಪರಿವೀಕ್ಷಕಿ ವಿಜಯಲಕ್ಷ್ಮೀ ಹಂಜಿ,ತಾಲೂಕಾ ಶಿಕ್ಷಕಕರ ಸಂಘದ ಅಧ್ಯಕ್ಷರಾದ ಯಶವಂತ ನಾಯ್ಕ,ಕಾರ್ಯದರ್ಶಿಗಳಾದ ಮಹಾದೇವ ಹಳದನಕರ, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ(ಸಿ.ಆರ್.ಪಿ) ಭಾಸ್ಕರ ಗಾಂವ್ಕರ,ನಂದಿಗದ್ದೆ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕರಾದ ಜನಾರ್ದನ ಹೆಗಡೆ,ಗುಂದ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಜೋಸಫ್ ಸರ್,ಸಹ ಶಿಕ್ಷಕರಾದ ನವೀನ ಶೇಟ್,ಗೋಕುಲ ಸ್ಥಳೇಕರ,ಪುರುಷೋತ್ತಮ ಜಿ,ದಿವ್ಯಾ ಮೇಡಂ,ರಿಯಾ, ಬಸವರಾಜ,ಶಾಲಾ ಎಸ್.ಡಿ.ಎಂ.ಸಿ. ಅಧ್ಯಕ್ಷರು, ಉಪಾಧ್ಯಕ್ಷರು,ಸರ್ವ ಸದಸ್ಯರು, ಪಾಲಕರು,ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.

Banner Ad