ಸುದ್ದಿ ಕನ್ನಡ ವಾರ್ತೆ
ಉತ್ತರ ಕನ್ನಡ ಜಿಲ್ಲೆಯ ರಾಮನಗುಳಿಯ ಕಂಡ್ರಮನೆ ಚಂದ್ರಶೇಖರ ವೈದ್ಯ ಅವರ ಕೊಟ್ಟಿಗೆಯಲ್ಲಿದ್ದ ಆಕಳು ಕರುವನ್ನು ಚಿರತೆಯೊಂದು ಭೇಟೆಯಾಡಿ ಕೊಂದ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಕರುವಿನ ಬಹುತೇಕ ಅರ್ಧ ದೇಹದ ಭಾಗವನ್ನು ಚಿರತೆ ಭಕ್ಷಿಸಿದೆ.
ಇತ್ತೀಚಿನ ದಿನಗಳಲ್ಲಿ ಚಿರತೆಗಳು ಜನವಸತಿ ಪ್ರದೇಶಗಳಲ್ಲಿ ಹೆಚ್ಚು ಓಡಾಟ ನಡೆಸುತ್ತಿವೆ ಹಾಗು ದನಕರುಗಳು ಮೇಲೆ ದಾಳಿ ಮಾಡುತ್ತಿರುವ ಪ್ರಕರಣಗಳು ಹೆಚ್ಚು ನಡೆಯುತ್ತಿದ್ದು ಇಲಾಖೆ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕಿದೆ.
