ಸುದ್ದಿ ಕನ್ನಡ ವಾರ್ತೆ
ಖಾನಾಪುರ:ತಾಲೂಕಿನ ಜಾಂಬೋಟಿಯಲ್ಲಿ ತೋಟಗಾರಿಕಾ ಇಲಾಖೆ ಬೆಳಗಾವಿ,ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಖಾನಾಪುರ ಹಾಗೂ ಸ್ಕೋಡವೇಸ್ ಸಂಸ್ಥೆ ಶಿರಸಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಪರಂಪರಾಗತ ಕೃಷಿ ವಿಕಾಸ ಯೋಜನೆಯ ಮಾಹಿತಿ ಕಾರ್ಯಾಗಾರ ಖಾನಾಪುರ ತಾಲೂಕಿನ ಜಾಂಬೋಟಿಯಲ್ಲಿ ನಡೆಯಿತು.
ಈ ಕಾರ್ಯಕ್ರಮದಲ್ಲಿ ಖಾನಾಪುರ ಕ್ಷೇತ್ರದ ಶಾಸಕರಾದ ವಿಠ್ಠಲ ಹಲಗೇಕರ,ರೈತ ಮುಖಂಡರು, ತೋಟಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳು ವೇದಿಕೆಯ ಮೇಲೆ ಇದ್ದರು. ಸ್ಕೋಡ್ ವೆಸ್ ಸಂಸ್ಥೆಯ ಡಾ.ವಿನಾಯಕ ಪೈ ಪರಂಪರಾಗತ ಕೃಷಿ ವಿಕಾಸ ಯೋಜನೆಯ ಅನುಷ್ಠಾನದ ಮಾಹಿತಿಯನ್ನು ನೀಡಿದರು.ಈ ಸಂದರ್ಭದಲ್ಲಿ ಖಾನಾಪುರ ಕ್ಷೇತ್ರದ ಶಾಸಕರಾದ ವಿಠ್ಠಲ ಹಲಗೇಕರ ಕಾರ್ಯಕ್ರಮವನ್ನು ಉದ್ದೇಶಿಸಿ ಸಂದರ್ಭೋಚಿತವಾಗಿ ಮಾತನಾಡಿದರು.ಎಲ್.ಆರ್.ಪಿ ಸುಭಾಷ ನಾಯ್ಕ ರೈತರಿಗೆ ಮಾಹಿತಿ ನೀಡಿ, ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡಿದರು.ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಿ ಯೋಜನೆಯ ಮಾಹಿತಿ ಪಡೆದುಕೊಂಡರು.
