ಸುದ್ಧಿಕನ್ನಡ ವಾರ್ತೆ
ಪಣಜಿ(ಕಾಣಕೋಣ): ಗೋವಾದ ಕಾಂಕೋಣದಲ್ಲಿರುವ ಶ್ರೀಗೋಕರ್ಣ ಪರ್ತಗಾಳಿ ಮಠದಲ್ಲಿ 550 ನೇಯ ವರ್ಧಂತಿ ಉತ್ಸವದ ಹಿನ್ನೆಲೆಯಲ್ಲಿ ಶುಕ್ರವಾರ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ರವರು ಆಗಮಿಸಿ ಶ್ರೀಪಠದ ಪೀಠಾಧಿಪತಿಗಳಾದ ಶ್ರೀಮದ್ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿ ರವರಿಂದ ಫಲಮಂತ್ರಾಕ್ಷತೆ ಆಶೀರ್ವಾದ ಪಡೆದುಕೊಂಡರು.

ಮಠದಲ್ಲಿ ಶಾಸಕ ಶಿವರಾಮ ಹೆಬ್ಬಾರ್ ರವರು ಶ್ರೀವೀರವಿಠ್ಠಲ ಹಾಗೂ ಶ್ರೀರಾಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಪರ್ತಗಾಳಿ ಮಠದಲ್ಲಿ ಪ್ರತಿಷ್ಠಾಪಿಸಲಾದ ಏಷ್ಯಾದ ಅತಿ ಎಚ್ಚರದ ಶ್ರೀರಾಮನ ದರ್ಶನ ಪಡೆದುಕೊಂಡರು.

ಪರ್ತಗಾಳಿ ಮಠದಲ್ಲಿ 550 ನೇಯ ವರ್ಷದ ವರ್ಧಂತಿ ಉತ್ಸವದ ಅಂಗವಾಗಿ ನವೆಂಬರ್ 27 ರಿಂದ ವಿವಿಧ ಧಾರ್ಮಿಕ ಕಾರ್ಯಕ್ರಮ ಆರಂಭಗೊಂಡಿದ್ದು ಡಿಸೆಂಬರ್ 7 ರವರೆಗೆ ನಡೆಯಲಿದೆ.