ಸುದ್ಧಿಕನ್ನಡ ವಾರ್ತೆ
ಪಣಜಿ(ಕಾಣಕೋಣ): ಗೋವಾದ ಕಾಣಕೋಣದ ಶ್ರೀಗೋಕರ್ಣ ಪರ್ತಗಾಳಿ ಮಠದಲ್ಲಿ 550 ನೇಯ ವರ್ಷದ ವರ್ಧಂತಿ ಉತ್ಸವ ನವೆಂಬರ್ 27 ರಿಂದ ಆರಂಭಗೊಂಡಿದ್ದು ಡಿಸೆಂಬರ್ 7 ರವರೆಗೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರತಿದಿನ 10 ಸಾವಿರಕ್ಕೂ ಹೆಚ್ಚು ಜನ ಭಕ್ತಾದಿಗಳು ಮಠಕ್ಕೆ ಆಗಮಿಸಿದ್ದಾರೆ. ಆಗಮಿಸಿದ ಎಲ್ಲ ಭಕ್ತಿರಿಗೆ ಮಠವು ಊಟೋಪಚಾರ ವ್ಯವಸ್ಥೆ ಅನ್ನಸಂತರ್ಪಣೆ ನೆರವೇರಿಸುತ್ತಿದೆ.
ಶ್ರೀಮಠದ ಪೀಠಾಧಿಪತಿಗಳಾದ ಶ್ರೀ ಶ್ರೀಮದ್ ವಿದ್ಯಾದೀಶತೀರ್ಥ ಶ್ರೀಪಾದ ವಡೇರ್ ಸ್ವಾಮೀಜಿ ರವರು ಅನ್ನಸಂತರ್ಪಣೆಗೂ ಮುನ್ನ ಅನ್ನಪೂರ್ಣೆಯ ಪೂಜೆ ನೆರವೇರಿಸಿದ ದೃಶ್ಯ.
ಪರ್ತಗಾಳಿ ಮಠಕ್ಕೆ ದೇಶವಿದೇಶಗಳಿಂದ ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದರೂ ಕೂಡ ಪರ್ತಗಾಳಿ ಮಠದಲ್ಲಿ ಯಾವುದೇ ಕೊರತೆ ಇಲ್ಲದಂತೆ ಅಕ್ಷಯ ಪಾತ್ರೆಯಂತೆಯೇ ಅನ್ನಸಂರ್ಪಣೆ ನೆರವೇರುತ್ತಿದೆ. ಇಷ್ಟೊಂದು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದರೂ ಸುವ್ಯವಸ್ಥಿತವಾಗಿ ಎಲ್ಲವೂ ನಡೆದುಕೊಂಡು ಹೋಗುತ್ತಿರುವುದು ವಿಶೇಷ. ಮಠಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸ್ವಯಂಸೇವಕರಾಗಿ ಸೇವೆ ಸಲ್ಲಿಸುತ್ತಿರುವುದು ಕಂಡುಬರುತ್ತಿದೆ.
