ಸುದ್ದಿ ಕನ್ನಡ ವಾರ್ತೆ
. ಜೋಯಿಡಾ:ಜಿಲ್ಲಾ ಪಂಚಾಯತ ಉತ್ತರಕನ್ನಡ,ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಜೋಯಿಡಾ,ಕ್ಷೇತ್ರ ಸಂಪನ್ಮೂಲ ಕೇಂದ್ರ ಜೋಯಿಡಾ,ಸಮೂಹ ಸಂಪನ್ಮೂಲ ಕೇಂದ್ರ ನಂದಿಗದ್ದೆ ಶೈಕ್ಷಣಿಕ ಜಿಲ್ಲೆ ಶಿರಸಿ(ಉತ್ತರಕನ್ನಡ) ಶ್ರೀ ಚನ್ನಬಸವೇಶ್ವರ ಪ್ರೌಢಶಾಲೆ ಇವರ ಸಂಯುಕ್ತಾಶ್ರಯದಲ್ಲಿ ಜೋಯಿಡಾ ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಹಾಗೂ ಕಲೋತ್ಸವ 2025-26 ರ ಕಾರ್ಯಕ್ರಮ ದಿನಾಂಕ:10-12-2025 ರ ಬುಧವಾರ ಶ್ರೀ ಚನ್ನಬಸವೇಶ್ವರ ಪ್ರೌಢಶಾಲೆ ಉಳವಿಯಲ್ಲಿ ಚಾಲನೆ ನೀಡಲಾಯಿತು.
ಕಾರ್ಯಕ್ರಮದ ಆರಂಭದಲ್ಲಿ ಸಹ ಶಿಕ್ಷಕಿಯಾದ ಪ್ರಿಯಾ ದೇಸಾಯಿ ವೇದಿಕೆಗೆ ಗಣ್ಯರನ್ನು ಆಹ್ವಾನಿಸಿದರು.ನಂತರ ಶಾಲೆಯ ವಿದ್ಯಾರ್ಥಿನಿಯರು ಸ್ವಾಗತ ಗೀತೆಯನ್ನು ಸುಶ್ರಾವ್ಯವಾಗಿ ಹಾಡುವ ಮೂಲಕ ಸ್ವಾಗತಿಸಿದರು. ಕಾರ್ಯಕ್ರಮದ ಅತಿಥಿ ಗಣ್ಯರನ್ನು ಹೂಗುಚ್ಛವನ್ನು ವಿದ್ಯಾರ್ಥಿಗಳಿಂದ ನೀಡುವ ಮೂಲಕ ಸ್ವಾಗತಿಸಲಾಯಿತು. ಸಭಾ ಕಾರ್ಯಕ್ರಮದ ವೇದಿಕೆಯಲ್ಲಿ ಉಳವಿ ಚನ್ನಬಸವೇಶ್ವರ ದೇವಸ್ಥಾನ ಟ್ರಸ್ಟ್ ಕಮಿಟಿಯ ಅಧ್ಯಕ್ಷ ಸಂಜಯ ಕಿತ್ತೂರ,ದೇವಸ್ಥಾನದ ಪ್ರಧಾನ ಅರ್ಚಕರಾದ ಶಂಕರಯ್ಯ ಕಲ್ಮಠ ಶಾಸ್ತ್ರೀ,ಉಳವಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಮಂಜುನಾಥ ಮೊಕಾಶಿ,ನಂದಿಗದ್ದೆ ಗ್ರಾಮ ಪಂಚಾಯತ ಅಧ್ಯಕ್ಷರಾದ ಅರುಣ ದೇಸಾಯಿ,ಸಾಮಾಜಿಕ ಕಾರ್ಯಕರ್ತರಾದ ಗೋಪಾಲ ಭಟ್ಟ,ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಶೀರ್ ಅಹ್ಮದ ಶೇಖ್,ತಾಲೂಕಾ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ಯಶವಂತ ನಾಯ್ಕ,ಬಿ ಆರ್ ಪಿ ಶಶಿಕಾಂತ ಹೂಲಿ,ಪರಮೇಶ್ವರ ಹರಿಕಾಂತ,ತಾಲೂಕಾ ದೈಹಿಕ ಶಿಕ್ಷಣ ಪರಿವೀಕ್ಷಕಿಯರಾದ ವಿಜಯಲಕ್ಷ್ಮೀ ಹಂಜಿ ಮೇಡಂ, ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ನರಸಣ್ಣನವರ, ಶಾಲೆಯ ಆಡಳಿತ ಮಂಡಳಿಯ ಪದಾಧಿಕಾರಿಗಳು,ಇನ್ನಿತರ ಗಣ್ಯರು ಕಾರ್ಯಕ್ರಮದ ಕುರಿತು ಸಂಧರ್ಭೋಚಿತವಾಗಿ ಮಾತನಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಕೊನೆಯಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಭಾಸ್ಕರ ಗಾಂವ್ಕರರವರು ಅತಿಥಿ ಗಣ್ಯರನ್ನು ಹೃದಯ ಪೂರ್ವಕವಾಗಿ ಅಭಿನಂದಿಸಿದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಎಲ್ಲರಿಗೂ ಉಳವಿ ಚನ್ನಬಸವೇಶ್ವರ ದೇವಸ್ಥಾನದ ವತಿಯಿಂದ ಉಪಹಾರ ಚಹಾ ನೀಡಲಾಯಿತು.
