ಸುದ್ಧಿಕನ್ನಡ ವಾರ್ತೆ
ಯಲ್ಲಾಪುರ: ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರದಲ್ಲಿ ಖಾಸಗಿ ಬಸ್ ಮತ್ತು ಟ್ಯಾಂಕರ್ ನಡುವೆ ಶುಕ್ರವಾರ ಬೆಳಿಗ್ಗೆ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಗಾಯವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಗುಳ್ಳಾಪುರದಲ್ಲಿ ಚಾಲುಕ್ಯ ಖಾಸಗಿ ಬಸ್ ಹಾಗೂ ಟ್ಯಾಂಕರ್ ನಡುವೆ ಈ ಅಪಘಾತ ಸಂಭವಿಸಿದೆ. ಈ ಘಟನೆಯಿಂದಾಗಿ ಈ ಭಾಗದಲ್ಲಿ ಕೆಲ ಸಮಯ ವಾಹ ನ ಸಂಚಾರದಲ್ಲಿ ವ್ಯತ್ಯಯವುಂಟಾಗಿದೆ ಎಂದು ವರದಿಯಾಗಿದೆ.
