ಸುದ್ಧಿಕನ್ನಡ ವಾರ್ತೆ
ಬೆಂಗಳೂರು: ಶನಿವಾರ ಬೆಂಗಳೂರಿನ ಭಾರತೀಯ ವಿದ್ಯಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನಜಾಗೃತಿ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಪಶ್ಚಿಮ ಘಟ್ಟದಲ್ಲಿ ಪ್ರಸ್ತಾಪಿತವಾಗಿರುವ ನದಿ ತಿರುವು ಯೋಜನೆಗಳಾದ ಶರಾವತಿ ಪಂಪಡ್ ಸ್ಟೋರೇಜ್, ಬೇಡ್ತಿ-ವರದ ಮತ್ತು ಅಘನಾಶಿನಿ-ವೇದಾವತಿ ಯೋಜನೆಗಳು, ಹಾಗೂ ಬೇಡ್ತಿ-ಅಘನಾಶಿನಿ ಕಣಿವೆಗಳ ಸಂರಕ್ಷಣೆಯ ಕುರಿತು ಗಂಭೀರ ಚಿಂತನ-ಮಂಥನ ನಡೆಯಿತು.

 

ಈ ಕಾರ್ಯಕ್ರಮವನ್ನು ಶ್ರೀಮದ್ ಜಗದ್ಗುರು ಶಂಕರಾಚಾರ್ಯ ಶಿರಸಿ ಸೊಂದಾ ಸ್ವರ್ಣವಲ್ಲಿಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳು ರವರ ದಿವ್ಯ ಸಾನಿಧ್ಯದಲ್ಲಿ, ಬೇಡ್ತಿ ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಶಿರಸಿ ಮತ್ತು ಶ್ರೀ ಸ್ವರ್ಣವಲ್ಲಿ ಮಹಾ ಸಂಸ್ಥಾನ ಸೋಂದಾ, ಶಿರಸಿ ಇದರ ಬೆಂಗಳೂರಿನ ಎಲ್ಲ ಅಂಗ ಸಂಸ್ಥೆಗಳ ಆಶ್ರಯದಲ್ಲಿ ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಪರಿಸರ ವಿಜ್ಞಾನಿಗಳು, ಪರಿಸರ ಪ್ರೇಮಿಗಳು ಮತ್ತು ಇತರ ಪ್ರಮುಖ ಗಣ್ಯರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಮತ್ತಿತರರು ಉಪಸ್ಥಿತರಿದ್ದರು.