ಸುದ್ಧಿಕನ್ನಡ ವಾರ್ತೆ
ಬೆಂಗಳೂರು: ಕಾಂಗ್ರೇಸ್ ನ ಹಿರೀಯ ಶಾಸಕ ಶಾಮನೂರು ಶಿವಶಂಕರಪ್ಪ (94) ವಿಧಿವಷರಾಗಿದ್ದಾರೆ. ಅವರು ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದು, ಕಳೆದ ಕೆಲ ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರು ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರರದ ಕಾಂಗ್ರೇಸ್ ಶಾಸಕರಾಗಿದ್ದರು.
ಶಾಮನೂರು ಶಿವಶಂಕರಪ್ಪ ರವರು 6 ಬಾರಿ ಶಾಸಕರಾಗಿ ಹಾಗೂ ಒಂದು ಬಾರಿ ಸಂಸದರಾಗಿಯೂ ಆಯ್ಕೆಯಾಗಿದ್ದರು.
