ಸುದ್ಧಿಕನ್ನಡ ವಾರ್ತೆ
Goa: ಗೋವಾಕ್ಕೆ ದೇವದರ್ಶನಕ್ಕೆ ಬಂದಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರು ಅಜಾಗರೂಕತೆಯಿಂದ ಬೈಕ್ ಓಡಿಸುತ್ತಿದ್ದರು ಎನ್ನಲಾಗಿದ್ದು, ಸ್ಥಳೀಯರು ಇವರಿಬ್ಬರು ಕನ್ನಡಿಗರಿಗೆ ಕಪಾಳಮೋಕ್ಷ ಮಾಡಿದ ಘಟನೆ ಗೋವಾದ ಪೊಂಡಾ ಸಮೀಪದ ರಾಮನಾಥಿಯಲ್ಲಿ ನಡೆದಿದೆ ಎನ್ನಲಾಗಿದೆ. ನಂತರ ಈ ಇಬ್ಬರೂ ಕನ್ನಡಿಗರನ್ನು ಪೋಲಿಸರು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದಾರೆ.
ಗೋವಾದ ಪೊಂಡಾ ರಾಮನಾಥಿ ದೇವಸ್ಥಾನಕ್ಕೆ ಬೆಂಗಳೂರಿನಿಂದ ಇಬ್ಬರು ಸಹೋದರರು ಆಗಮಿಸಿದ್ದರು. ದೇವಸ್ಥಾನಕ್ಕೆ ಬೈಕ್ ಮೂಲಕ ಅತಿ ವೇಗವಾಗಿ ಹಾಗೂ ಅಜಾಗರೂಕತೆಯಿಂದ ಪಕ್ಕದಲ್ಲಿದ್ದ ಕಾಲ್ನಡಿಗೆಯಲ್ಲಿ ಸಾಗುತ್ತಿದ್ದ ಪ್ರಯಾಣಿಕರ ಜೀವಕ್ಕೆ ಹಾನಿಯಾಗುವ ಸಂಭವವಿತ್ತು ಎನ್ನಲಾಗಿದ್ದು ಈ ಹಿನ್ನೆಲೆಯಲ್ಲಿ ಸ್ಥಳೀಯರು ಬೆಂಗಳೂರಿನ ಈ ಇಬ್ಬರು ಸಹೋದರರನ್ನು ಹಿಡಿದು ನಿಲ್ಲಿಸಿ ಕಪಾಳಮೋಕ್ಷ ಮಾಡಿದ್ದಾರೆ ಎನ್ನಲಾಗಿದೆ. ಈ ಸಹೋದರರು ಉದ್ದೇಶಪೂರ್ವಕವಾಗಿ ಬೈಕನ್ನು ಬೇಕಾಬಿಟ್ಟಿಯಾಗಿ ಚಲಾಯಿಸುತ್ತಿದ್ದರು ಎನ್ನಲಾಗಿದ್ದು, ಸ್ಥಳೀಯರು ಮತ್ತು ಈ ಇಬ್ಬರು ಬೆಂಗಳೂರಿನ ಪ್ರವಾಸಿಗರ ನಡುವೆ ವಾಗ್ವಾದ ನಡೆದಿದೆ.
ನಂತರ ಈ ಕುರಿತು ಸ್ಥಳೀಯ ಪೋಲಿಸ್ ಠಾಣೆಗೆ ಮಾಹಿತಿ ನೀಡಿದಾಗ ಘಟನಾ ಸ್ಥಳದಲ್ಲಿದ್ದ ಸ್ಥಳೀಯರ ದೂರಿನ ಅಧಾರದ ಮೇಲೆ ಪೋಲಿಸರು ಈ ಇಬ್ಬರು ಬೆಂಗಳೂರಿನ ಸಹೋದರರನ್ನು ವಷಕ್ಕೆ ಪಡೆದಿದ್ದಾರೆ. ನಂತರ ಜಾಮೀನಿನ ಮೇಲೆ ಇವರನ್ನು ಬಿಡುಗಡೆ ಮಾಡಿದ್ದಾರೆ. ಈ ಸಹೋದರರಿಬ್ಬರೂ ಬೆಂಗಳೂರಿನಲ್ಲಿ ಸರ್ಕಾರಿ ನೌಕರಿಯಲ್ಲಿದ್ದಾರೆ ಎನ್ನಲಾಗಿದೆ.
ಪ್ರಸಕ್ತ ಸಕ್ಟೋಬರ್ ನಿಂದ ಗೋವಾ ಪ್ರವಾಸಿ ಸೀಜನ್ ಆರಂಭಗೊಂಡಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಗೋವಾಕ್ಕೆ ಆಗಮಿಸುತ್ತಿದ್ದಾರೆ. ಗೋವಾಕ್ಕೆ ಆಗಮಿಸುವ ಪ್ರವಾಸಿಗರು ಇಲ್ಲಿ ಇತರರಿಗೆ ತೊಂದರೆಯಾಗದಂತೆ ನಡೆದುಕೊಳ್ಳಬೇಕು ಎಂಬುದು ಸ್ಥಳೀಯರ ಆಘ್ರಹವಾಗಿದೆ.