ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನ ನಂದಿಗದ್ದೆ ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಪ್ರೌಢಶಾಲೆ ಗುಂದದ ವಾರ್ಷಿಕ ಕ್ರೀಡಾಕೂಟ ಡಿಸೆಂಬರ 20 ರ ಶನಿವಾರರಂದು ನಡೆಯಲಿದೆ. ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಪ್ರತಿನಿಧಿಗಳು,ವಿವಿಧ ಕ್ಷೇತ್ರದ ಗಣ್ಯರು,ಶಿಕ್ಷಣ ಇಲಾಖೆಯ ಅಧಿಕಾರಿ ವರ್ಗದವರು,ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು, ಪಾಲಕರು, ಪೋಷಕರು, ಹಳೆಯ ವಿದ್ಯಾರ್ಥಿಗಳು, ಶಿಕ್ಷಕ ವೃಂದದವರು ಉಪಸ್ಥಿತರಿರಲಿದ್ದಾರೆ.
ಕ್ರೀಡಾಕೂಟದಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ವೈಯುಕ್ತಿಕ,ಗುಂಪು ಆಟಗಳ ಸ್ಪರ್ಧೆಗಳು ನಡೆಯಲಿವೆ ಎಂದು ಸರಕಾರಿ ಪ್ರೌಢಶಾಲೆ ಗುಂದದ ಮುಖ್ಯ ಶಿಕ್ಷಕರಾದ ಜೋಸಫ್ ಬಿ ಗೊನ್ಸಾಲಿಸ್ ಹಾಗೂ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಫಕೀರಪ್ಪ ದರಿಗೊಂಡ ಮಾಹಿತಿ ನೀಡಿರುತ್ತಾರೆ.
