ಸುದ್ದಿ ಕನ್ನಡ ವಾರ್ತೆ
ಜೊಯಿಡಾ:ತಾಲೂಕಿನ ಅಸು ಗ್ರಾಮ ಪಂಚಾಯತ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಿಂದೋಳಿ ಶಾಲೆಯ ಸಹ ಶಿಕ್ಷಕರಾದ ಆನಂದ ಪಿ ರವರು ಜಿಲ್ಲಾ ಪಂಚಾಯತ ಉತ್ತರಕನ್ನಡ,ಉಪನಿರ್ದೇಶಕರ ಕಾರ್ಯಾಲಯ ಶಿರಸಿ ಶೈಕ್ಷಣಿಕ ಜಿಲ್ಲೆ,ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಾಥಮಿಕ/ಪ್ರೌಢಶಾಲಾ ಶಿಕ್ಷಕರಿಗೆ ಏರ್ಪಡಿಸಿದ ಜಿಲ್ಲಾ ಮಟ್ಟದ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಗಳು 2025-26 ಸಾಲಿನ ರಸಪ್ರಶ್ನೆ(ವಿಜ್ಞಾನ)ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಇವರ ಸಾಧನೆಗೆ ಶಾಲೆಯ ಮುಖ್ಯ ಶಿಕ್ಷಕರಾದ ಅನಿಲ ರಾಠೋಡ,ಸಹ ಶಿಕ್ಷಕಿ ವಿದ್ಯಾ ಮೇಡಂ, ಎಸ್.ಡಿ.ಎಂ.ಸಿ.ಅಧ್ಯಕ್ಷ,ಉಪಾಧ್ಯಕ್ಷ,ಸರ್ವ ಸದಸ್ಯರು, ಪಾಲಕರು,ಪೋಷಕರು,ಹಳೆಯ ವಿದ್ಯಾರ್ಥಿಗಳು,ಮಕ್ಕಳು ಅಭಿನಂದನೆ ಸಲ್ಲಿಸಿದ್ದಾರೆ.
