ಸುದ್ದಿ ಕನ್ನಡ ವಾರ್ತೆ

ಚಿಕ್ಕಮಗಳೂರು : ಇಂದಿನ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿ ಚಲಿಸುತ್ತಿದ್ದ ಕಾರು ಇದ್ದಕ್ಕಿದ್ದಂತೆ ಬೆಂಕಿಹತ್ತಿ ಉರಿದ ಘಟನೆ ನಡೆದಿದೆ.

ಮೊದಲು ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೆಲವೇ ಕ್ಷಣದಲ್ಲಿ ಸಂಪೂರ್ಣ ಕಾರು ಸುಟ್ಟು ಬಸ್ಮವಾಗಿದೆ.

ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆ ಆವರಣದಲ್ಲಿ  ಈ ಘಟನೆ ನಡೆದಿದೆ.

ನೀರು ಮತ್ತು ಆಕ್ಸಿಜನ್ ಸಿಲಿಂಡರ್ ಮೂಲಕ ಸ್ಥಳೀಯರು ಬೆಂಕಿ ನಂದಿಸಿದ್ದಾರೆ.ಕಾರಿನಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರಿನಲ್ಲಿದ್ದವರನ್ನು ಆಂಬುಲೆನ್ಸ್ ಚಾಲಕರು ಕೆಳಗಿಳಿಸಿದ್ದಾರೆ.