ಸುದ್ದಿ ಕನ್ನಡ ವಾರ್ತೆ
. ಜೋಯಿಡಾ:ತಾಲೂಕಿನ ಕಾತೇಲಿ(ಕುಂಬಾರವಾಡಾ)ಗ್ರಾಮ ಪಂಚಾಯತ ವ್ಯಾಪ್ತಿಯ ಕೆಲೋಲಿಯಲ್ಲಿ ನಡೆದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ NSS BOYS ನಗರಬಾವಿ ತಂಡವು ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.
ಮೂರು ದಿನಗಳ ಕಾಲ ನಡೆದ ಕ್ರಿಕೆಟ್ ಟೂರ್ನಿಯಲ್ಲಿ ಗ್ರಾಮೀಣ ತಂಡಗಳು ಭಾಗವಹಿಸಿದ್ದವು. ಸಂಘಟಕರು ಕ್ರೀಡಾಕೂಟದಲ್ಲಿ ಭಾಗವಹಿಸಿದ ಎಲ್ಲರಿಗೂ ಅಚ್ಚುಕಟ್ಟಾದ ಊಟದ ವ್ಯವಸ್ಥೆ ಮಾಡಿದ್ದರು.
ಅಂತಿಮ ದಿನದ ಪೈನಲ್ ಪಂದ್ಯದಲ್ಲಿ ನಗರಬಾವಿಯ NSS BOYS ತಂಡವು ಕಾರ್ಟೋಳಿ ತಂಡವನ್ನು ಸೋಲಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು.
