ಸುದ್ದಿ ಕನ್ನಡ ವಾರ್ತೆ
ಜೋಯಿಡಾ:ತಾಲೂಕಿನ ಕಾತೇಲಿ(ಕುಂಬಾರವಾಡಾ)ಗ್ರಾಮ ಪಂಚಾಯತ ವ್ಯಾಪ್ತಿಯ ಕುಂಬಾರವಾಡಾದ ಕಾಳಿ ರೈತ ಉತ್ಪಾದಕ ಕಂಪನಿ ಲಿಮಿಟೆಡ್ ಕಚೇರಿಯಲ್ಲಿ ರೈತರಿಗಾಗಿ ಭೂ ಸಂರಕ್ಷಣಾ ಕಾಯ್ದೆ ಜಾರಿಗೊಳಿಸಿದ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಜನ್ಮ ದಿನದ ಪ್ರಯುಕ್ತ ರಾಷ್ಟ್ರೀಯ ರೈತರ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಕಂಪನಿಯ ಆಡಳಿತ ಸಮಿತಿಯ ಅಧ್ಯಕ್ಷರು, ನಿರ್ದೇಶಕರು, ಸಿಬ್ಬಂದಿ ವರ್ಗದವರು,ರೈತ ಪುರುಷರು, ಮಹಿಳೆಯರು ಉಪಸ್ಥಿತರಿದ್ದರು. ಕೊನೆಯಲ್ಲಿ ಎಲ್ಲರಿಗೂ ಸಿಹಿಯನ್ನು ವಿತರಿಸಲಾಯಿತು.
