ಸುದ್ದಿ ಕನ್ನಡ ವಾರ್ತೆ
ಕುಮಟಾ:ಉತ್ತರಕನ್ನಡ ಜಿಲ್ಲೆಯ ಮಾನ್ಯ ಸಂಸದರಾದ ವಿಶ್ವೇಶ್ವರ ಹೆಗಡೆ ಕಾವೇರಿಯವರು ಶುಕ್ರವಾರ ಕುಮಟಾ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ, ಅಲ್ಲಿ ಪ್ರಗತಿಯಲ್ಲಿರುವ ಎರಡನೇ ಹೈ-ಲೆವೆಲ್ ಪ್ಲಾಟ್‌ಫಾರ್ಮ್ ನಿರ್ಮಾಣ ಕಾಮಗಾರಿಯನ್ನು ಕುಮಟಾ ಕ್ಷೇತ್ರದ ಮಾನ್ಯ ಶಾಸಕರಾದ ದಿನಕರ್ ಶೆಟ್ಟಿ ಅವರು ಕೊಂಕಣ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಪ್ರಮುಖ ಮುಖಂಡರೊಂದಿಗೆ ವೀಕ್ಷಿಸಿದರು.
ಕುಮಟಾ ರೈಲ್ವೆ ನಿಲ್ದಾಣದಲ್ಲಿ ಎರಡನೇ ಪ್ಲಾಟ್‌ಫಾರ್ಮ್ ನಿರ್ಮಿಸಬೇಕೆಂಬುದು ಸ್ಥಳೀಯರ ಹಾಗೂ ಪ್ರಯಾಣಿಕರ ಅನೇಕ ವರ್ಷಗಳ ಬೇಡಿಕೆಯಾಗಿತ್ತು. ಇದರೊಂದಿಗೆ ಗೋಕರ್ಣ ರೈಲ್ವೆ ನಿಲ್ದಾಣದಲ್ಲಿಯೂ ಪ್ಲಾಟ್‌ಫಾರ್ಮ್ ಕಾಮಗಾರಿ ಆರಂಭವಾಗಿದ್ದು, ನಮ್ಮ ಕ್ಷೇತ್ರದ ಭಟ್ಕಳ ಹಾಗೂ ಮುರುಡೇಶ್ವರ ರೈಲ್ವೆ ನಿಲ್ದಾಣಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ನಮ್ಮ ಭಾಗದ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಯ ಕುರಿತು ಸಂಸದರು ಸಲ್ಲಿಸಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ತಕ್ಷಣವೇ ಅನುದಾನ ಹಾಗೂ ಕಾಮಗಾರಿಗಳನ್ನು ಮಂಜೂರುಗೊಳಿಸಿದ ಗೌರವಾನ್ವಿತ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರಿಗೂ ಹಾಗೂ ಕೇಂದ್ರ ಸಚಿವರಾದ ಶ್ರೀ ವಿ. ಸೋಮಣ್ಣ ಅವರಿಗೂ ಈ ಮೂಲಕ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇವೆ.
ಈ ಕಾಮಗಾರಿಗಳು ಪೂರ್ಣಗೊಂಡಲ್ಲಿ ಪ್ರಯಾಣಿಕರಿಗೆ ಸುಸಜ್ಜಿತ ಸೌಲಭ್ಯಗಳು ದೊರೆಯಲಿವೆ ಹಾಗೂ ಈ ಭಾಗದ ಪ್ರವಾಸೋದ್ಯಮ ಮತ್ತು ಸಾರಿಗೆ ವ್ಯವಸ್ಥೆಗೆ ಹೆಚ್ಚಿನ ಬಲ ಸಿಗಲಿದೆ.
