ಸುದ್ಧಿಕನ್ನಡ ವಾರ್ತೆ
ಪಣಜಿ: ರಾಷ್ಟ್ರಪತಿ ದ್ರೌಪದಿ ಮುರ್ಮು ರವರು ಡಿಸೆಂಬರ್ 27 ರಂದು ಶನಿವಾರ ಗೋವಾಕ್ಕೆ ಆಗಮಿಸಲಿದ್ದಾರೆ. ಅವರ ಗೋವಾ ಭೇಟಿಯ ಹಿನ್ನೆಲೆಯಲ್ಲಿ ಡಿಸೆಂಬರ್ 27 ಮತ್ತು 28 ರಂದು ವಾಹನ ಸಂಚಾರಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ.
ಡಿಸೆಂಬರ್ 27 ರಂದು ರಾಷ್ಟ್ರಪತಿಗಳು ಸಂಜೆ ಗೋವಾದ ದಾಬೋಲಿಂ ವಿಮಾನ ನಿಲ್ದಾಣದಿಂದ ಪಣಜಿ ಸಮೀಪದ ದೌನಾಪಾವುಲಾಗೆ ಪ್ರಯಾಣ ಬೆಳೆಸಲಿದ್ದಾರೆ. ಡಿಸೆಂಬರ್ 28 ರಂದು ಬೆಳಿಗ್ಗೆ ದೋನಾಪಾವುಲಾದಿಂದ ದಾಬೋಲಿಂ ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳ ಓಡಾಟದ ಸಂದರ್ಭದಲ್ಲಿ ಸಾರ್ವಜನಿಕರ ವಾಹನಗಳ ಓಡಾಟಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ.
ರಾಷ್ಟ್ರಪತಿಗಳ ಓಡಾಟದ ಸಂದರ್ಭದಲ್ಲಿ ದಾಬೋಲಿಂ ವಿಮಾನ ನಿಲ್ದಾಣದಿಂದ ಚಿಕಲಿಮ್,ಕೊರ್ಟಾಲಿಂ, ಹೊಸ ಜುವಾರಿ ಸೇತುವೆ, ಬಾಂಬೋಲಿಂ-ದೋನಾಪಾವುಲಾ, ವರೆಗಿನ ರಸ್ತೆಯಲ್ಲಿ ಅಂಬುಲೆನ್ಸ ಮತ್ತು ಇತರ ತುರ್ತು ವಾಹನಗಳನ್ನು ಹೊರತುಪಡಿಸಿ ಸಾರ್ವಜನಿಕ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ. ಡಿಸೆಂಬರ್ 27 ರಂದು ಸಂಜೆ 7 ಗಂಟೆಯಿಂದ 9 ಗಂಟೆಯವರೆಗೆ ಹಾಗೂ ಡಿಸೆಂಬರ್ 28 ರಂದು ಬೆಳಿಗ್ಗೆ 7.30 ರಿಂದ 9.30 ರವರೆಗೆ ಸಾರ್ವಜನಿಕ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ.
ಪ್ರಯಾಣಿಕರಿಗೆ ವೆರ್ಣಾದ ಬಿರ್ಲಾ ಕ್ರಾಸ್ ಜಂಕ್ಷನ್ ನಿಂದ ದಾಬೋಲಿಂ ವಿಮಾನ ನಿಲ್ದಾಣದ ಕಡೆಗೆ ಎನ್ ಎಚ್-566 ರಲ್ಲಿ ಓಡಾಟ ನಡೆಸಲು ಅವಕಾಶವಿರುತ್ತದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ರವರ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ವಿವಿಧ ಸ್ಥಳಗಳಲ್ಲಿ ಜನಸಾಮಾನ್ಯರ ವಾಹನ ಸಂಚಾರವನ್ನು ನಿಯಂತ್ರಿಸಲಾಗುತ್ತದೆ. ಅಗತ್ಯವಿರುವೆಡೆಗೆ ಪರ್ಯಾಯ ಮಾರ್ಗಗಳ ಮೂಲಕ ಸಾರ್ವಜನಿಕ ವಾಹನ ಸಂಚಾರ ಪರ್ಯಾಯ ಮಾರ್ಗದ ಮೂಲಕ ತಿರುಗಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
