ಸುದ್ದಿ ಕನ್ನಡ ವಾರ್ತೆ
ಗುಳ್ಳಾಪುರ: ಪ್ರಭು ಶ್ರೀ ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀರಾಮ ಲಲ್ಲಾ ಪ್ರಾಣ ಪ್ರತಿಷ್ಠೆಯಾಗಿ ಡಿಸೆಂಬರ್ 31ರಂದು ಬುಧವಾರ ಎರಡು ವರ್ಷ ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಶ್ರೀರಾಮ ಸೇವಾ ವೃಂದದ ವತಿಯಿಂದ ಅಂಕೋಲಾ ತಾಲೂಕಿನ ರಾಮನಗುಳಿ ಶ್ರೀರಾಮ ಪಾದುಕ ದೇವಸ್ಥಾನದಲ್ಲಿ ದ್ವಿತೀಯ ವರ್ಷದ ವಿವಿಧ ಸೇವಾ ಕಾರ್ಯಕ್ರಮ ಆಯೋಜಿಸಲಾಗಿದೆ.
ಅಂದು ಬೆಳಿಗ್ಗೆ 11 ಗಂಟೆಯಿಂದ ಶ್ರೀರಾಮ ತಾರಕ ಜಪ, ಶ್ರೀರಾಮಲಲ್ಲಾ ಸ್ತೋತ್ರ, ಹನುಮಾನ್ ಚಾಲೀಸಾ, ಪಠಣ ನಡೆಯಲಿದೆ. ಮಧ್ಯಾಹ್ನ 12:30ಕ್ಕೆ ಮಹಾಪೂಜೆ ಮಧ್ಯಾಹ್ನ 1.30 ಕೆ ಸಾರ್ವಜನಿಕ ಅನ್ನ ಪ್ರಸಾದ ವಿತರಣೆ, ಸಂಜೆ 6.30 ರಿಂದ ಸೀತಾ ಕಲ್ಯಾಣ ಕೀರ್ತನೆ, ಸಂಜೆ ಎಂಟು ಗಂಟೆಗೆ ಸಂಧ್ಯಾ ಆರತಿ ಕಾರ್ಯಕ್ರಮ ಜರುಗಲಿದೆ.
ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಿಗೆ ಶ್ರೀರಾಮಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ತನುಮಾನ ಸಹಕಾರದೊಂದಿಗೆ ಶ್ರೀದೇವರ ಕೃಪೆಗೆ ಪಾತ್ರರಾಗಬೇಕೆಂದು ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.
