ಸುದ್ಧಿಕನ್ನಡ ವಾರ್ತೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ವಿಶ್ವಕರ್ಮ ಸಮುದಾಯದವರ ಸಹಯೋಗದಲ್ಲಿ ಸ್ಥಳೀಯ ಗ್ರಾಮದೇವತೆ ದ್ಯಾಮವ್ವದೇವಿ ದೇವಾಲಯದ ಸಭಾಂಗಣದಲ್ಲಿ ಜ.1ರಂದು ಮುಂಜಾನೆ 10 ಗಂಟೆಗೆ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.

ಅಮರಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಪನೆ, ಪೂಜಾ ಕಾರ್ಯಕ್ರಮಗಳು ಜರುಗಿದ ಬಳಿಕ ಸಿಹಿ ವಿತರಿಸಲಾಸಲಾಗುವುದು. ಸ್ಥಳೀಯ ರಾಜಕೀಯ ಮುಖಂಡರು, ಗಣ್ಯರು, ವಿಶ್ವಕರ್ಮ ಸಮಾಜದ ಹಿರಿಯ ನಾಗರಿಕರು, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಯುವಕರು, ಸ್ಥಳೀಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸ್ಥಳೀಯ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಆಯೋಜಕ ಸಮಿತಿ ತಿಳಿಸಿದೆ.