ಸುದ್ದಿ ಕನ್ನಡ ವಾರ್ತೆ
ಯಲ್ಲಾಪುರ: ಯಲ್ಲಾಪುರ ಪಟ್ಟಣದಲ್ಲಿ ಹಿಂದೂ ಮಹಿಳೆಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದ ಆರೋಪಿ ರಫೀಕ್ ಈತ ನಿಸರ್ಗ ಮನೆ ಹಿಂಭಾಗದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಭಾನುವಾರ ಬೆಳಿಗ್ಗೆ ಪೊಲೀಸರು ನಡೆಸುತ್ತಿದ್ದ ಶೋಧಕ ಆಚರಣೆ ಸಂದರ್ಭದಲ್ಲಿ ಈತನ ಮೃತ ದೇಹ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.

ಹಿಂದೂ ಸಂಘಟನೆ ಭಾನುವಾರ ಯಲ್ಲಾಪುರ ಬಂದ್ ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಯಲ್ಲಾಪುರ ಪಟ್ಟಣ ಸಂಪೂರ್ಣ ಬಂದ್ ಆಗಿದೆ. ಈ ಭೀಕರ ಘಟನೆಯನ್ನು ವಿರೋಧಿಸಿ ಇಂದಿನ ಬಸವೇಶ್ವರ ವೃತ್ತದ ಬಳಿ ಹಿಂದೂ ಸಂಘಟನೆಯ ಕಾರ್ಯಕರ್ತರು ಖಂಡನಾ ಸಭೆ ನಡೆಸಿದರು. ಬಂದ್ ಹಿನ್ನೆಲೆಯಲ್ಲಿ ಇಂದು ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿತ್ತು.

ಈ ಕೊಲೆ ಘಟನೆಯ ನಂತರ ಪೊಲೀಸರು ನಾಲ್ಕು ವಿಶೇಷ ತಂಡಗಳನ್ನು ರಚಿಸಿ ತೀವ್ರಶೋಧ ನಡೆಸಿದರು. ನಿರಂತರವಾಗಿ ಹುಡುಕಾಟ ನಡೆಸಿದ ನಂತರ ಅರಣ್ಯ ಪ್ರದೇಶದಲ್ಲಿ ಕೊಲೆ ಆರೋಪಿ ರಫೀಕ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಕೊಲೆ ಆರೋಪಿ ರಫೀಕ್ ಈತನು ರಂಜಿತಾಳಿಗೆ ಮದುವೆಯಾಗುವಂತೆ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ. ಆದರೆ ಈಕೆ ಮದುವೆಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ಶನಿವಾರ ನಡು ರಸ್ತೆಯಲ್ಲಿಯೇ ಚಾಕುವಿನಿಂದ ಹಿಡಿದು ರಂಜಿತಾಳನ್ನು ಹತ್ಯೆಗೈದಿದ್ದ ಎನ್ನಲಾಗಿದೆ.