ಸುದ್ಧಿಕನ್ನಡ ವಾರ್ತೆ
ಪಣಜಿ: ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದ 70 ವರ್ಷದ ವೃದ್ಧ ಮಹಿಳೆಯ ಮೃತದೇಹ ಭಾನುವಾರ ಗೋವಾದ ಥಿವಿ-ಮಾಡೆಲ್ ನದಿಯಲ್ಲಿ ಪತ್ತೆಯಾಗಿದೆ. ಈ ಘಟನೆಯಿಂದಾಗಿ ಈ ಭಾಗದಲ್ಲಿ ಆತಂಕದ ವಾತಾವರಣ ಸೃಷ್ಠಿಯಾಗಿದೆ. ಈ ಹಿಳೆಯ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೋಲಿಸರು ಈ ಪ್ರಕರಣದ ತನಿಖಾ ಕಾರ್ಯ ಕೈಗೆತ್ತಿಕೊಂಡಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಲಭ್ಯವಾದ ಮಾಹಿತಿಯ ಅನುಸಾರ- 70 ವರ್ಷದ ಈ ವೃದ್ಧ ಮಹಿಳೆಯು ಕಳೆದ ಕೆಲ ದಿನಗಳಿಂದ ನಾಪತ್ತೆಯಾಗಿದ್ದಳು. ಈ ವೃದ್ಧೆಯ ಕುಟುಂಬಸ್ಥರು ಎಲ್ಲೆಡೆ ಶೋಧ ನಡೆಸಿದರೂ ಕೂಡ ಈಕೆ ಪತ್ತೆಯಾಗಿರಲಿಲ್ಲ. ಕೊನೆಗೆ ಈಕೆ ನಾಪತ್ತೆಯಾಗಿರುವ ಕುರಿತಂತೆ ಸ್ಥಳೀಯ ಪೋಲಿಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದರು.
ಈ ಕುರಿತಂತೆ ಪ್ರಕರಣ ದಾಖಲಿಸಿಕೊಂಡಿರುವ ಕೋಲ್ವಾ ಪೋಲಿಸರು ಕೂಡಲೇ ತನಿಖಾ ಕಾರ್ಯ ಕೈಗೆತ್ತಿಕೊಂಡಿದ್ದರು. ಎಲ್ಲೆಡೆ ತನಿಖೆ ನಡೆಸಿದ ನಂತರ ಪೋಲಿಸರು ನದಿಯಲ್ಲಿ ಶೋಧ ಕಾರ್ಯ ಕೈಗೊಳ್ಳುವ ನಿಣಣಯ ತೆಗೆದುಕೊಂಡರು. ಈ ಶೋಧಕಾರ್ಯದಲ್ಲಿ ಅಗ್ನಿಶಾಮಕ ದಳದ ಸಿಬ್ಬಂಧಿಗಳು ಪಾಲ್ಗೊಂಡಿದ್ದರು.
ಅಷ್ಟರಲ್ಲಿಯೇ ಮೀನುಗಾರರು ನದಿಯಲ್ಲಿ ಮೃತದೇಹ ತೇಲುತ್ತಿರುವುದನ್ನು ಕಂಡು ಪೋಲಿಸರಿಗೆ ಮಾಹಿತಿ ನೀಡಿದರು. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂಧಿಗಳು ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಉತ್ತರಗೋವಾ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಮಹಿಳೆಯ ಸಾವಿಗೆ ಕಾರಣವೇನು ಎಂಬ ಕುರಿತಂತೆ ಪೋಲಿಸರು ತನಿಖಾ ಕಾರ್ಯ ಕೈಗೆತ್ತಿಕೊಂಡಿದ್ದಾರೆ.
